ಬೆಳಗಾವಿ, ಸೆ.7: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಷ್ಠಾಪಿಸುವ ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು.
ನಂತರ ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
***