ಬೆಂಗಳೂರು: ಕರ್ನಾಟಕದಲ್ಲಿ ಬಾರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ . ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ.
ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ ಫಲಿತಾಂಶವು ನಿರ್ಣಾಯಕವಾಗಿ ತಮ್ಮ ಪಕ್ಷದ ಪರವಾಗಿರಲಿದೆ ಮತ್ತು ಯಾವುದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಮತ್ತು ಚುನಾವಣೋತ್ತರ ಮೈತ್ರಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಡಿಕೆಶಿ, “ನನ್ನ ಮೊದಲ ಪ್ರತಿಕ್ರಿಯೆ. ಎಕ್ಸಿಟ್ ಪೋಲ್ ನ ಅಂಕಿಅಂಶಗಳನ್ನು ನಾನು ನಂಬುವುದಿಲ್ಲ. ನನ್ನ ಮೌಲ್ಯಮಾಪನದ ಪ್ರಕಾರ, ನಾವು 146 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ.ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.