This is the title of the web page
This is the title of the web page

ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಶೇ.50ರಷ್ಟಿರುವ ಮೀಸಲಾತಿ ಮಿತಿ 75ಕ್ಕೆ ಹೆಚ್ಚಿಸುವ ಭರವಸೆ

ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಶೇ.50ರಷ್ಟಿರುವ ಮೀಸಲಾತಿ ಮಿತಿ 75ಕ್ಕೆ ಹೆಚ್ಚಿಸುವ ಭರವಸೆ

 

ಬೆಂಗಳೂರು:  ವಿವಿಧ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಎಷ್ಟಿದೆ ಎನ್ನುವುದನ್ನು ನೋಡುವುದಾದರೆ ಕರ್ನಾಟಕ – 50, ಮಹಾರಾಷ್ಟ್ರ – 73, ತಮಿಳುನಾಡು – 69. ತೆಲಂಗಾಣ – 62. ಕೇರಳ – 50. ಆಂಧ್ರ ಪ್ರದೇಶ – 50ರಷ್ಟು ಒಟ್ಟು ಮೀಸಲಾತಿ ಇದೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಾಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ, ಶೇ.50ರಷ್ಟಿರುವ ಮೀಸಲಾತಿ ಮಿತಿಯನ್ನು 75ಕ್ಕೆ ಹೆಚ್ಚಿಸುವ ಭರವಸೆಯನ್ನು ನೀಡಿದೆ. ಆದರೆ, ಈ ಭರವಸೆಗೆ ಕಾನೂನು ತೊಡಕುಗಳು ಎದುರಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ರಾಜ್ಯ ಬಿಜೆಪಿ ಹಿಂದುಳಿದ ವರ್ಗ (ಬಿಸಿ) ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದು, ಈ ಮೀಸಲಾತಿ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಮಂಗಳವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಎಸ್‌ಸಿಗಳ ಮೀಸಲಾತಿಯನ್ನು ಶೇಕಡಾ 15 ರಿಂದ 17 ಕ್ಕೆ ಮತ್ತು ಎಸ್‌ಟಿಗಳ ಮೀಸಲಾತಿಯನ್ನು ಶೇಕಡಾ 3 ರಿಂದ ಶೇಕಡಾ 7 ಕ್ಕೆ ಹೆಚ್ಚಿಸುವುದಾಗಿ ಪ್ರಸ್ತಾಪಿಸಿದೆ. ಅಲ್ಲದೆ, ಲಿಂಗಾಯತರು ಮತ್ತು ಒಕ್ಕಲಿಗರು ಮತ್ತು ಇತರ ಸಮುದಾಯಗಳಿಗೆ ಮೀಸಲಾತಿಯನ್ನು ಶೇ.50 ರಿಂದ 75ಕ್ಕೆ ಏರಿಸುವುದಾಗಿ ಹೇಳಿದೆ.

ಪಂಚಮಸಾಲಿ, ಕುರುಬ, ಒಕ್ಕಲಿಗ ಸಮುದಾಯಗಳುಸೇರಿ ಹಲವು ಸಮುದಾಯಗಳು ಮೀಸಲಾತಿ ವಿಚಾರವಾಗಿ ಬೀದಿಗಿಳಿದಿದ್ದವು. ಎಸ್‌ಸಿ/ಎಸ್‌ಟಿ ಸಮುದಾಯಗಳು ಕೂಡ ಮೀಸಲು ಹೆಚ್ಚಳಕ್ಕೆ ಹೋರಾಟ ಮಾಡಿ ಭಾಗಶಃ ಯಶಸ್ವಿಯಾಗಿವೆ. ಸಾಲು ಸಾಲು ಮೀಸಲಾತಿ ಹೋರಾಟಗಳಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಇದರ ಮಧ್ಯೆ ಇದೀಗ ಕಾಂಗ್ರೆಸ್, ಈ ವಿಧಾನಸಭೆ ಚುನಾವಣೆಯಲ್ಲಿ ಈ ಮೂಲಕ ಕಾಂಗ್ರೆಸ್​ ಈ ಬಾರಿಯ ಚುನಾವಣೆಗೆ ಮೀಸಲಾತಿ ಅಸ್ತ್ರ ಪ್ರಯೋಗಿಸಿದೆ.

ಶೇ.50ರಷ್ಟು ಮೀಸಲು ಹೆಚ್ಚಿಸಬೇಕೆಂದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿದೆ. ಇದಕ್ಕಾಗಿ ಸಂಸತ್‌ನ ಎರಡು ಸದನಗಳಲ್ಲಿ ಮಸೂದೆ ಪಾಸ್‌ ಮಾಡಿಕೊಂಡು ಬಳಿಕ, ಶೇ.50ಕ್ಕೂ ಹೆಚ್ಚು ರಾಜ್ಯಗಳು ಒಪ್ಪಿಗೆ ಸೂಚಿಸಬೇಕಿದೆ. ಬಳಿಕ ರಾಷ್ಟ್ರಪತಿಗಳ ಅಂಕಿತ ಬೇಕು. ಇಷ್ಟೊಂದು ಸಂಕೀರ್ಣ ಪ್ರಕ್ರಿಯೆ ಮುಗಿದ ಬಳಿಕ ಸಂವಿಧಾನದ ತಿದ್ದುಪಡಿಯಾಗಿ ಮೀಸಲಾತಿ ಹೆಚ್ಚಳವಾಗುತ್ತದೆ.

ಆಡಳಿತರೂಢ ಬಿಜೆಪಿ ಸರ್ಕಾರ ಕೆಲ ಸಮುದಾಯಗಳ ಮೀಸಲಾತಿಯಲ್ಲಿ ಬದಲಾವಣೆ ಮಾಡಿತ್ತು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ ಶೇ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿತ್ತು. ಇನ್ನು ಅಲ್ಪ ಸಂಖ್ಯಾತರಿಗೆ ಈ ಹಿಂದೆ 2ಬಿಯಡಿ ನೀಡುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಕ್ಕೆ ಸೇರಿಸಲು ನಿರ್ಧರಿಸಲಾಗಿತ್ತು.