ಘಾಜಿಯಾಬಾದ್:”ನಾನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೀಟುಗಳ ಭವಿಷ್ಯ ಬಗ್ಗೆ ಹೇಳುವುದಿಲ್ಲ. 15-20 ದಿನಗಳ ಹಿಂದೆ ಬಿಜೆಪಿ ಸುಮಾರು 180 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಭಾವಿಸಿದ್ದೆ ಆದರೆ ಈಗ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದು ಕಷ್ಟ ಇದೆ ಕೆಲವೊಂದು ಸಮೀಕ್ಷೆಗಳು ಹೇಳುತ್ತಿವೆ ಉತ್ತರ ಪ್ರದೇಶದ ಅಮೇಥಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀವ್ರ ಊಹಾಪೋಹಗಳ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ಇಂದು ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಯನಾಡ್ ಹೊರತುಪಡಿಸಿ ಅಮೇಥಿಯಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, “ಅಮೇಥಿ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧರಿಸುತ್ತದೆ, ನನಗೆ ಯಾವುದೇ ಆದೇಶ ಬಂದರೂ ನಾನು ಅದನ್ನು ಪಾಲಿಸುತ್ತೇನೆ” ಎಂದು ಹೇಳಿದರು.
ನಮ್ಮ ಪಕ್ಷದಲ್ಲಿ, ಈ ನಿರ್ಧಾರಗಳನ್ನು CEC (ಕೇಂದ್ರ ಚುನಾವಣಾ ಸಮಿತಿ) ಸಭೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಒತ್ತಿ ಹೇಳಿದರು.
ಇಂದು ಉತ್ತರ ಪ್ರದೇಶದ ಗಜಿಯಾಬಾದ್ ನಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ನಾಯಕ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೀಟುಗಳ ಭವಿಷ್ಯ ಬಗ್ಗೆ ಹೇಳುವುದಿಲ್ಲ. 15-20 ದಿನಗಳ ಹಿಂದೆ ಬಿಜೆಪಿ ಸುಮಾರು 180 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಭಾವಿಸಿದ್ದೆ ಆದರೆ ಈಗ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದು ಕಷ್ಟ ಇದೆ ಕೆಲವೊಂದು ಸಮೀಕ್ಷೆಗಳು ಹೇಳುತ್ತಿವೆ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ನಮಗೆ ವರದಿಗಳು ಬರುತ್ತಿವೆ. ಉತ್ತರ ಪ್ರದೇಶದಲ್ಲಿ ನಾವು ಬಹಳ ಬಲವಾದ ಮೈತ್ರಿಯನ್ನು ಹೊಂದಿದ್ದೇವೆ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂಬ ವಿಶ್ವಾಸವಿದೆ ಎಂದರು.
ಕಳೆದ 10 ವರ್ಷಗಳಲ್ಲಿ ನೋಟು ಅಮಾನ್ಯೀಕರಣ, ತಪ್ಪು ಜಿಎಸ್‌ಟಿ ಜಾರಿ ಮತ್ತು ಅದಾನಿಗಳಂತಹ ದೊಡ್ಡ ಕೋಟ್ಯಾಧಿಪತಿಗಳನ್ನು ಬೆಂಬಲಿಸುವ ಮೂಲಕ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿಯ ವ್ಯವಸ್ಥೆಯನ್ನು ಕಡಿಮೆ ಮಾಡಿದ್ದಾರೆ. ನಾವು ನಮ್ಮ ಪ್ರಣಾಳಿಕೆಯಲ್ಲಿ 23 ಯೋಜನೆಗಳನ್ನು ನೀಡಿದ್ದೇವೆ, ಒಂದು ಕ್ರಾಂತಿಕಾರಿ ಕಲ್ಪನೆ- ನಾವು ಉತ್ತರ ಪ್ರದೇಶದ ಎಲ್ಲಾ ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ಅಪ್ರೆಂಟಿಸ್‌ಶಿಪ್ ಹಕ್ಕನ್ನು ನೀಡುತ್ತೇವೆ. ಯುವಕರ ಬ್ಯಾಂಕ್ ಖಾತೆಯಲ್ಲಿ ವರ್ಷಕ್ಕೆ 1 ಲಕ್ಷ ರೂಪಾಯಿ ಮತ್ತು ನಾವು ಕೋಟಿಗಟ್ಟಲೆ ಯುವಕರಿಗೆ ಈ ಹಕ್ಕುಗಳನ್ನು ನೀಡುತ್ತಿದ್ದೇವೆ ಎಂದರು.
ಕೇರಳದ ವಯನಾಡ್‌ನ ತಮ್ಮ ಘೋಷಿತ ಸ್ಥಾನದ ಜೊತೆಗೆ, ರಾಹುಲ್ ಗಾಂಧಿ ಅವರು ಈ ಹಿಂದೆ ಸತತ ಮೂರು ಅವಧಿಗೆ ಪ್ರತಿನಿಧಿಸಿದ್ದ ಅಮೇಥಿ ಕ್ಷೇತ್ರದಿಂದ ಮತ್ತು ಈ ಹಿಂದೆ ಸೋನಿಯಾ ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹವಿದೆ.
ಎರಡೂ ಸ್ಥಾನಗಳನ್ನು ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, ಕುಟುಂಬದ ಇಬ್ಬರು ವಂಶಸ್ಥರು ಅಲ್ಲಿಂದ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಸ್ಥಳೀಯ ಘಟಕಗಳು ಒತ್ತಾಯಿಸಿವೆ.
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (SP) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದಲ್ಲಿ 17 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.