ಹಾಸನ, ಏ 24,ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡದೆ ಇರುವುದು ನಿಜ;ಬೇಸರ ಹೊರಹಾಕಿದ ಹೆಚ್.ಡಿ ದೇವೇಗೌಡರು ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಸುಮಲತಾ ಅಂಬರೀಶ್ ಸಹಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಮಾತನಾಡಿರುವ ಹೆಚ್.ಡಿ ದೇವೇಗೌಡರು, ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ನೀವು ಕೇಳಬಹುದು. ನಾವು ಈ ಭಾಗದ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಆದರೂ ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಸಂಪತ್ತು ಹಂಚಿಕೆ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರ ಹೇಳಿದೆ. ಅವರು ಹೇಗಾದರೂ ಸರಿ, ಅಧಿಕಾರಿಕ್ಕೆ ಬರಬೇಕು ಎಂದು ಹೊರಟಿದ್ದಾರೆ.