ಹುಬ್ಬಳ್ಳಿ: ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡೆ ಬಹಳ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಸೇರ್ಪಡೆ ಫಿಕ್ಸ್ ಆಗಿದೆ ಎನ್ನಲಾಗಿದೆ.
ಇಂದು ರಾತ್ರಿ ಶಾಮನೂರು ಶಿವಶಂಕರಪ್ಪ ನಿವಾಸದಲ್ಲಿ ಮಿಡ್ ಶೆಟ್ಟರ್ ಮಿಡ್ ನೈಟ್ ಮೀಟಿಂಗ್ ನಲ್ಲಿ ಭಾಗಿಯಾಗಲಿದ್ದು, ಈ ಮೂಲಕ ಕಾಂಗ್ರೆಸ್ ಸೇರ್ಪಡೆ ಫಿಕ್ಸ್ ಆಗಿದೆ ಎನ್ನಲಾಗಿದೆ.ಈ ಹಿನ್ನೆಲೆ ಶೆಟ್ಟರ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಜಗದೀಶ್ ಶೆಟ್ಟರ್ ನಡೆ ಬಹಳ ಕುತೂಹಲ ಮೂಡಿಸಿದೆ.
ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಕಳುಹಿಸಿದ ವಿಶೇಷ ವಿಮಾನದಲ್ಲಿ ಶೆಟ್ಟರ್ ಪ್ರಯಾಣ ಬೆಳೆಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬರುವ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಶೆಟ್ಟರ್ ಮೊದಲು ರಾಜೀನಾಮೆ ಕೊಟ್ಟು ಫ್ರೀ ಮ್ಯಾನ್ ಆಗಲಿ, ನಂತರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡೋಣ. ಬಿಜೆಪಿ ಪಕ್ಷದಲ್ಲಿ ಶೆಟ್ಟರ್ ಬಹಳ ದೊಡ್ಡದಾಗಿ ಬೆಳೆದವರು. ನಾವು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ, ಪಕ್ಷವನ್ನು ಬೆಳೆಸಿದವರಿಗೆ ದ್ರೋಹ ಆಗುತ್ತಿದೆ. ಶೆಟ್ಟರ್ ಕಾಂಗ್ರೆಸ್ ಬರುವ ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ ಎಂದು ಡಿಕೆಶಿ ಹೇಳಿದರು.