This is the title of the web page
This is the title of the web page

ಬಿಜೆಪಿ ಮೈತ್ರಿ ಧರ್ಮ ಅನುಸರಿಸದಿದ್ರೆ ದಾವಣಗೆರೆಯಲ್ಲಿ ಈ ಬಾರಿ ಬಿಜೆಪಿ ಗೆಲುವು ಕಷ್ಟ: ಜೆಡಿಎಸ್ ಮುಖಂಡ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಎಚ್ಚರಿಕೆ 

ಬಿಜೆಪಿ ಮೈತ್ರಿ ಧರ್ಮ ಅನುಸರಿಸದಿದ್ರೆ ದಾವಣಗೆರೆಯಲ್ಲಿ ಈ ಬಾರಿ ಬಿಜೆಪಿ ಗೆಲುವು ಕಷ್ಟ: ಜೆಡಿಎಸ್ ಮುಖಂಡ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಎಚ್ಚರಿಕೆ 

 

ದಾವಣಗೆರೆ, ಮಾ 19:  ಬಿಜೆಪಿ ಮುಖಂಡರು ಸಿಡಿದೆದ್ದಿರುವುದನ್ನು ಗಮನಿಸಿದರೆ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿರಬಹುದು ಎಂಬ ಮಾತೂ ಜನರಿಂದಲೇ ಕೇಳಿ ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಎನ್‌ಡಿಎನಲ್ಲಿ ಮೈತ್ರಿ ಧರ್ಮ ಪಾಲನೆ ಆಗಲೇಬೇಕು. ಜೆಡಿಎಸ್ ವರಿಷ್ಠರ ಸೂಚನೆ ಇದುವರೆಗೆ ಬಂದಿಲ್ಲ. ಅಪ್ಪಣೆ ಬಂದ ಮೇಲೆ ನಾವು ಕೆಲಸ ಮಾಡುತ್ತೇವೆ. ಅಲ್ಲಿಯವರೆಗೆ ಜಿಲ್ಲಾಧ್ಯಕ್ಷರು ಹಾಗೂ ನಾನು ಸೂಚನೆ ನೀಡುವವರೆಗೂ ಕಾರ್ಯಕರ್ತರು ತಟಸ್ಥರಾಗಬೇಕು. ಈ ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸುಲಭವೇನಿಲ್ಲ. ಇದಕ್ಕೆ ನಾನಾ ಕಾರಣಗಳಿವೆ. ಒಳಬೇಗುದಿ ಸರಿಪಡಿಸಿಕೊಳ್ಳದಿದ್ದರೆ ಗೆಲುವು ಕಷ್ಟಸಾಧ್ಯ ಎಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಐದು ತಾಲೂಕುಗಳಲ್ಲಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್, ಬಸವರಾಜ್ ನಾಯ್ಕ್, ಹರಪನಹಳ್ಳಿಯ ಕರುಣಾಕರ ರೆಡ್ಡಿ ಸೇರಿದಂತೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಹಿರಂಗವಾಗಿಯೇ ಅಸಮಾಧಾನ, ಭಿನ್ನಮತ ಹೊರಹಾಕಿದ್ದಾರೆ. ಮೈತ್ರಿ ಧರ್ಮ ಪಾಲನೆ ಆಗಲೇಬೇಕು. ಜೊತೆಗೆ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಬೇಕು ಎಂದರು.

ಆಂಧ್ರಪ್ರದೇಶಕ್ಕೆ ನರೇಂದ್ರ ಮೋದಿ ಅವರು ಬಂದಾಗ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಖ್ಯಾತ ನಟ ಪವನ್ ಕಲ್ಯಾಣ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಆದ್ರೆ, ಕಲಬುರಗಿ ಹಾಗೂ ಶಿವಮೊಗ್ಗಕ್ಕೆ ಆಗಮಿಸಿದಾಗ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿಲ್ಲ. ಹೇಗೆ ಮೈತ್ರಿ ಧರ್ಮ ಪಾಲನೆ ಮಾಡಿದಂತಾಗುತ್ತದೆ. ಇದು ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ಅವರು ನೆನಪಾಗಲಿಲ್ವಾ? ಇದು ಪಕ್ಷಕ್ಕೆ ಮಾಡಿದ ಅವಮಾನ. ಈ ಬಾರಿಯೂ ಪೈಪೋಟಿ ಹೆಚ್ವಿದೆ. ಗೆಲುವು ಸುಲಭವಲ್ಲ ಎಂದು ಪ್ರತಿಪಾದಿಸಿದರು.

ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ನನಗೆ ಕರೆ ಮಾಡಿದ್ದರು. ಆಗ ನಾನೇ ನಿಮ್ಮ ಗೊಂದಲ ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದೆ. ರಾಜ್ಯದ ವರಿಷ್ಠರು ನಮಗೆ ಇನ್ನೂ ಆದೇಶ ನೀಡಿಲ್ಲ. ಇದಕ್ಕೆ ಕಾಯುತ್ತಿದ್ದೇವೆ. ಅಲ್ಲಿಂದ ಬಂದ ಬಳಿಕ ಕಾರ್ಯೋನ್ಮುಖರಾಗುತ್ತೇವೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದ , ರಾಮಚಂದ್ರಮೂರ್ತಿ, ಟಿ.ಅಸ್ಗರ್, ಬಾತಿ ಶಂಕರ್, ಗಾದ್ರಿ ರಾಜು, ಎನ್.ಗಂಗಾಧರಪ್ಪ, ಕುಬೇರಪ್ಪ ಹೆಚ್ .ಕೆ.ಬಸವರಾಜ್,