ಕಾಂಗ್ರೆಸ್‌ ಮರುಜೀವಿ ಕೊಟ್ಟಿದೆ, ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ:ಡಿ.ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್

ಕಾಂಗ್ರೆಸ್‌ ಮರುಜೀವಿ ಕೊಟ್ಟಿದೆ, ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ:ಡಿ.ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್

 

ಬೆಂಗಳೂರು: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಿರಿಯ ನಾಯಕರು ಎಂದು ಗೌರವಯುತವಾಗಿ ನಡೆಸಿಕೊಂಡಿದ್ದೆವು. ಆದರೆ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ನನಗೆ ಇನ್ನೂ ರಾಜೀನಾಮೆ ಪತ್ರ ತಲುಪಿಲ್ಲ. ಕೆಪಿಸಿಸಿ ಕಚೇರಿಯಲ್ಲೇ ನಿಂತು ಹೇಳುತ್ತಾ ಇದ್ದೀನಿ. ನನಗೆ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್‌ ಪಕ್ಷ ಮರುಜೀವಿ ಕೊಟ್ಟಿದೆ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ರು. ಬಿಜೆಪಿ ವಿರುದ್ಧ ಬಹಳಷ್ಟು ಹೇಳಿಕೆಗಳನ್ನ ಕೊಟ್ಟಿದ್ದಾರೆ. ಯಾವ ರೀತಿ ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನುತ್ತಿದ್ದರು.

ಚುನಾವಣೆಯಲ್ಲಿ 35 ಸಾವಿರ ಮತಗಳಿಂದ ಸೋತಾಗಲೂ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಗೌರವದಿಂದ ನಡೆಸಿಕೊಂಡು ಎಂಎಲ್‌ಸಿ ಮಾಡಿದ್ದೇವೆ. ಒತ್ತಡದಿಂದ ಬಿಜೆಪಿ ಪಕ್ಷಕ್ಕೆ ಹೋಗಿದ್ದಾರಾ ಇಲ್ಲವೋ ಗೊತ್ತಿಲ್ಲ. ಅಂದು ಟಿಕೆಟ್ ತಪ್ಪಿದಾಗ ದೇಶದ ಹಿತ‌ ನೆನಪಿರಲಿಲ್ಲವಾ? ಜಗದೀಶ್ ಶೆಟ್ಟರ್ ಅವರು ನಮ್ಮ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.