ವಿಜಯಪುರ ಏ 22 : ಬಿಜೆಪಿ ಪಕ್ಷದಿಂದ ಪ್ರಮುಖ ಲಿಂಗಾಯತರು ಮುಖಂಡರು ದೂರ ಸರಿತ್ತಿರುವ ಕಾರಣ ಬಿಜೆಪಿಯಲ್ಲಿ ಈಗ ಲಿಂಗಾಯಿತರ ಪ್ರಾಬಲ್ಯ ಕಡಿಮೆಯಾಗುತ್ತಿದೆ ಬಿಜೆಪಿಯಲ್ಲಿ ನಡೆದುಕೊಂಡ ರೀತಿ ಲಿಂಗಾಯತ ಸಮಾಜವು ಆಕೋಶ ಕಾರಣವಾಗಿದೆ. ಎಂದು ಮಾತುಗಳು ಕೇಳಿ ಬರುತ್ತವೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಲವಾರು ಕಸರತ್ತುಗಳನ್ನು ಮಾಡುತ್ತಿವೆ. ಜಾತಿ ಆಧರಿತ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ಕರ್ನಾಟಕದಲ್ಲಿ ಪ್ರಬಲ ಸಮುದಾಯಗಳನ್ನು ಸೆಳೆಯಲು ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷ ಕಾಂಗ್ರೆಸ್ ತಂತ್ರಗಳನ್ನು ರೂಪಿಸಿವೆ.
ಕರ್ನಾಟಕದ ಪ್ರಮುಖ ಸಮುದಾಯವಾದ ಲಿಂಗಾಯತರನ್ನು ಸೆಳೆಯಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಮುನಿಸಿಕೊಂಡಿರುವ ಪ್ರಮುಖ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಅಡಿಯಲ್ಲಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಲಿಂಗಾಯತ ವಿರೋಧಿ ಬಿಜೆಪಿ ಎಂಬುದನ್ನು ಬಿಂಬಿಸಲು ಕಾಂಗ್ರೆಸ್ ಹಲವು ತಂತ್ರಗಳನ್ನು ರೂಪಿಸಿದೆ. ಇದರ ಭಾಗವಾಗಿ ಏಪ್ರಿಲ್ 23 ರಂದು ಕ್ರಾಂತಿಯೋಗಿ ಬಸವಣ್ಣನ ಸಮಾಧಿ ಸ್ಥಳವಾದ ಕೂಡಲ ಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಅಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
‘ಯಡಿಯೂರಪ್ಪನವರನ್ನು ಬಲವಂತವಾಗಿ ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿಯು ಈಗ ಲಿಂಗಾಯತರ ವಿಷಯದಲ್ಲಿ ಅವರನ್ನು ಕೈಗೊಂಬೆಯಾಗಿ ಬಳಸಿಕೊಂಡು ಡ್ಯಾಮೇಜ್ ಕಂಟ್ರೋಲ್ ಮಾಡಲು ಹೊರಟಿದೆ. ಎಂದು ಎಂ ಬಿ ಪಾಟೀಲ ಆರೋಪಿಸಿದ್ದಾರೆ.