ಬೆಳಗಾವಿ: ಜಿಲ್ಲೆಯ ಕಿತ್ತೂರು ಮತಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವರು ಹಾಗೂ ಹಿರಿಯರಾದ ಡಿ.ಬಿ.ಇನಾಮದಾರ ಅವರ ಅಗಲಿಕೆ ಕೇವಲ ನಮಗಷ್ಟೇ ಅಲ್ಲ. ನಮ್ಮ ರಾಜ್ಯದ ಜನತೆಗೆ ದುಃಖ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಮಾಜಿ ಸಚಿವ ಡಿ.ಬಿ.ಇನಾಮದಾರ ಅವರ ನಿಧನ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಇವರು ಸರ್ವ ಧರ್ಮ ಹಾಗೂ ಜನಪರ ವ್ಯಕ್ತಿತ್ವವುಳ್ಳ ರಾಜಕಾರಣಿ ಎಂದೇ ಖ್ಯಾತಿ ಹೊಂದಿದ್ದರು. ಇವರ ಅಕಾಲಿಕ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಭರಿಸಲಾಗದ ನಷ್ಟವನ್ನುಂಟು ಮಾಡಿದೆ. ಇನಾಮದಾರ್ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ದೊರೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಡಿ.ಬಿ.ಇನಾಮದಾರ ಅವರ ನಿಧನದ ಕುರಿತು ಸಂತಾಪ ಸೂಚಿಸಿದ್ದಾರೆ.