ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದರೆ ಗೋಕಾಕ, ಕಾಗವಾಡ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಬೈಲಹೊಂಗಲ, ಸವದತ್ತಿ, ತೇರದಾಳ, ಜಮಖಂಡಿ ಹಾಗೂ ಅಥಣಿಯಲ್ಲಿ ಕಾಂಗ್ರೆಸ್ ಗೆ ಲಾಭ ನಿಶ್ಚಿತ
ಬೆಳಗಾವಿ: ಇದಕ್ಕೂ ಮೊದಲು ಸುವರ್ಣ ಲೋಕ ದಿನಪತ್ರಿಕೆಯಲ್ಲಿ ಆಂತರಿಕ ವಿಶ್ಲೇಷಣೆ ಮಾಡಲಾಗಿದ್ದು, ಸವದಿಯವರು ಕಾಂಗ್ರೆಸ್ ಸೇರುವುದು ಪಕ್ಕಾ ಎನ್ನಲಾಗಿದೆ. ರಾಜೀನಾಮೆ ಬಳಿಕ ಮಹತ್ವದ ಬೆಳವಣಿಗೆಯಾಗಲಿದೆ.ಎಂದು
ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಳಗಾವಿಯ ವಿಮಾನ ನಿಲ್ದಾಣದಿಂದ ಡಿ.ಕೆ.ಶಿವಕುಮಾರ ಹೆಸರಿನ ವಿಶೇಷ ವಿಮಾನದಿಂದ ಬೆಂಗಳೂರಿಗೆ ತೆರಳಿರುವ ಅವರು ನೇರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಹೋಗಿ ರಾಜಕೀಯ ಮಾತುಕತೆ ನಡೆಸಿದ್ದಾರೆ.
ನಿರೀಕ್ಷೆಯಂತೆ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದರೆ ಗೋಕಾಕ, ಕಾಗವಾಡ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಬೈಲಹೊಂಗಲ, ಸವದತ್ತಿ, ತೇರದಾಳ, ಜಮಖಂಡಿ ಹಾಗೂ ಅಥಣಿಯಲ್ಲಿ ಕಾಂಗ್ರೆಸ್ ಗೆ ಲಾಭವಾಗುವುದು ನಿಶ್ಚಿತವಾಗಿದೆ ಎಂದು ಸಿದ್ದರಾಮಯ್ಯ ನವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿದ್ದರು.