This is the title of the web page
This is the title of the web page

ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು :  ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿ: ಮಹಿಳೆಗೆ ಡಿಕೆ ಶಿವಕುಮಾರ್ ಮೆಚ್ಚುಗೆ

ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು :  ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿ: ಮಹಿಳೆಗೆ ಡಿಕೆ ಶಿವಕುಮಾರ್ ಮೆಚ್ಚುಗೆ

 

ಬೆಂಗಳೂರು:ಗೃಹಲಕ್ಷ್ಮಿ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಡ್ಜ್ ಖರೀದಿ ಮಾಡಿದ್ದಾರೆ. 17,500 ರೂಪಾಯಿ ಕೊಟ್ಟು ಫ್ರಿಡ್ಜ್ ಖರೀದಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಪ್ರತೀ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿ ಮಾಡಿದ್ದು, ಮಹಿಳೆಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಲತಾ ಎಂಬ ಗೃಹಿಣಿ ಪ್ರತಿ ತಿಂಗಳು ಬಂದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಡ್ಜ್ ಖರೀದಿ ಮಾಡಿದ್ದಾರೆ. 17,500 ರೂಪಾಯಿ ಕೊಟ್ಟು ಫ್ರಿಡ್ಜ್ ಖರೀದಿಸಿದ್ದಾರೆ. ಹಬ್ಬದಂದು ಮನೆಗೆ ಬಂದ ಫ್ರಿಡ್ಜ್​ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.