. ಬೆಳಗಾವಿ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಬೆಳಗಾವಿ ಕಾಂಗ್ರೇಸ್ ಅಧೀವೇಶನದ ಶತಮಾನೋತ್ಸವ ಸಮಾರಂಭದ ಸಿದ್ಧತೆಗಳನ್ನು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ಪರಿಶೀಲಿಸಿದರು.
ನಗರದ ವೀರಸೌಧದಲ್ಲಿ ಮಾತನಾಡಿದ ಅವರು1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಬೆಳಗಾವಿ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರದ ವತಿಯಿಂದ ಗಾಂಧೀ ಭಾರತ ಕಾರ್ಯಕ್ರಮವನ್ನು ವರ್ಷವೀಡಿ ಆಯೋಜಿಸಲಾಗುತ್ತಿದೆ.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಮಹತ್ವ ಹಾಗೂ ಮುಖ್ಯವಾಗಿ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ಎಲ್ಲರಿಗೂ ತಲುಪಿಸುವದು ಈ ಕಾರ್ಯಕ್ರಮದ ಉದ್ದೇಶಾವಗಿದೆ ಎಂದರು.
ಡಿ.26 ಹಾಗೂ 27 ರಂದು ಜರುಗಲಿರುವ ಶತಮಾನೋತ್ಸವ ಕಾರ್ಯಕ್ರಮದ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವರಾದ ಎಚ್.ಕೆ.ಪಾಟೀಲ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜು(ಆಸೀಫ್) ಸೇಠ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್,ಪೊಲಿಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ,
ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ,
ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಟ್ರಸ್ಟನ್ ಕಾರ್ಯದರ್ಶಿಗಳಾದ ರವೀಂದ್ರ ದೇಶಪಾಂಡೆ, ಹಿರಿಯ ಪತ್ರಕರ್ತರುಗಳಾದ ಸುಭಾಷ ಕುಲಕರ್ಣಿ, ಹೃಷಿಕೇಶ ಬಹದ್ದೂರ ದೇಸಾಯಿ ಸೇರಿದಂತೆ ವಿವಿಧ ಇಲಾಖೆ ಅಧಕಾರಿಗಳು ಉಪಸ್ಥಿತರಿದ್ದರು.