This is the title of the web page
This is the title of the web page

ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ : ಹೆಣ್ಣುಮಕ್ಕಳ ತಾಳಿ, ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಅಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ 

ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ : ಹೆಣ್ಣುಮಕ್ಕಳ ತಾಳಿ, ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಅಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ 

 

ಚಿಕ್ಕೋಡಿ / ಕಾಗವಾಡ  ಸಮಾವೇಶದಲ್ಲಿ ಈಗ ಮೋದಿ ಹಿಂದುಳಿದ ಜಾತಿ ಮೋದಿ ಹಿಂದುಳಿದ ಜಾತಿ ಸಮುದಾಯಗಳನ್ನು ಮುಸ್ಲೀಮರ ವಿರುದ್ಧ ಎತ್ತಿಕಟ್ಟಲು ಭಯನಾಕ ಸುಳ್ಳು ಸೃಷ್ಟಿಸಿದ್ದಾರೆ. ಸುಳ್ಳು ಹೇಳೋ ಮೋದಿಗೆ ನಾಚಿಕೆನೇ ಆಗಲ್ಲ. ಮಾನ ಮರ್ಯಾದೆನೇ ಇಲ್ಲ ಇವರಿಗೆ: ಮೋದಿ ವಿರುದ್ಧ ಸಿಎಂ ಆಕ್ರೋಶ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಮತ ಹಾಕ್ತೀರೋ, ನುಡಿದಂತೆ ನಡೆದ ನಮಗೆ ಮತ ಹಾಕ್ತೀರೋ ತೀರ್ಮಾನಿಸಿ ಎಂದು ಕರೆ ನೀಡಿದರು. ವಿರುದ್ಧ ಎತ್ತಿಕಟ್ಟಲು ಭಯನಾಕ ಸುಳ್ಳು ಸೃಷ್ಟಿಸಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು

ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರ.

ಪ್ರತಿ ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿ ಪ್ರತಿ ಭಾರತೀಯರ ಹಣೆಗೆ ಮೂರು ನಾಮ ತಿಕ್ಕಿದ್ರು. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ನಂಬಿಸಿ ಕೆಲಸ ಕೇಳಿದ್ರೆ ಪಕೋಡ ಮಾರಿ ಅಂತೀರಿ. ಥೂ ನಿಮಗೆ ನಾಚಿಕೆನೇ ಆಗಲ್ವಾ ಎಂದು ಪ್ರಶ್ನಿಸಿದರು.

ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿ-ಸಮುದಾಯಗಳನ್ನು ನಂಬಿಸಿ ವಂಚಿಸ್ತೀರಿ? ಸುಳ್ಳು ಹೇಳ್ಕೊಂಡು ತಿರುಗ್ತೀರಿ ಎಂದು ಕೇಳಿದರು.ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ‌ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ .ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ  ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಇದ್ದರು.