ಬೆಳಗಾವಿ:ಬೆಳಗಾವಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ದ್ವಿತಿಯ ದರ್ಜೆ ಸಹಾಯಕ(SDA) ದರ್ಜೆಯಲ್ಲಿ ಕರ್ತವ್ಯ ನಿರ್ವಹಿಸಿ, ಬೆಂಗಳೂರಿನ ವಾರ್ತಾ ಆಯುಕ್ತ ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ವರ್ಷದ ಹಿಂದೆಯಷ್ಟೇ ನಿವೃತ್ತಿಯಾಗಿದ್ದ ನಬಿ ರಾಜಾಪುರೆ ಅನಾರೋಗ್ಯದಿಂದ ಬುಧವಾರ ನಿಧನರಾದರು.
ಕಳೆದ ಎರಡೂ ವರ್ಷದ ಹಿಂದೆ ನಿವೃತ್ತಿಯಾಗಿದ್ದ ಇವರು, ಪತ್ರಕರ್ತರು ಹಾಗೂ ಸಾರ್ವಜನಿಕರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿ, ಓರ್ವ ಪುತ್ರ, ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ಹಾಗೂ ಬೆಳಗಾವಿ ಪತ್ರಕರ್ತರು ನಭಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.