ಮಂಡ್ಯ: ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರ ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅಸಾಮಾಧಾನ ಹೊರಹಾಕಿದ್ದಾರೆ.
ಒಕ್ಕಲಿಗರಿಗೆ ಮೀಸಲಾತಿ ಏರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ನಾವು ಕೇಳಿದ್ದು ಶೇ.4 ರಿಂದ ಶೇ.16 ಗೆ ಮೀಸಲಾತಿ ಹೆಚ್ಚಳ ಮಾಡಿ ಅಂತ. ಆದರೆ ಯಾರದ್ದೋ ಶೇ.2 ಕಿತ್ತು ಶೇ.6 ಗೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ ಎಂದರು.