This is the title of the web page
This is the title of the web page

ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ; ಎನ್ ಸಿಪಿ, ಟಿಎಂಸಿ, ಸಿಪಿಐ ಮಾನ್ಯತೆ ರದ್ದು ..?

ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ; ಎನ್ ಸಿಪಿ, ಟಿಎಂಸಿ, ಸಿಪಿಐ ಮಾನ್ಯತೆ ರದ್ದು ..?

 

ನವದೆಹಲಿ: ಭಾರತೀಯ ಚುನಾವಣಾ ಆಯೋಗ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನೀಡಿದೆ ಮತ್ತು ಎನ್ ಸಿಪಿ, ಟಿಎಂಸಿ ಮತ್ತು ಸಿಪಿಐ ಪಕ್ಷಗಳ ರಾಷ್ಟ್ರೀಯ ಸ್ಥಾನಮಾನವನ್ನು ರದ್ದುಪಡಿಸಿದೆ.ದೆಹಲಿ ಮತ್ತು ಪಂಜಾಬ್‌ನಲ್ಲಿ ದೊಡ್ಡ ಬಹುಮತ ಮತ್ತು ಅತಿ ದೊಡ್ಡ ಮತ ಹಂಚಿಕೆಗಳೊಂದಿಗೆ ಎಎಪಿ ಅಧಿಕಾರದಲ್ಲಿದೆ. ಅಲ್ಲದೇ ಮಾರ್ಚ್ ನಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಶೇ. 6.77ರಷ್ಟು ಮತಗಳನ್ನು ಪಡೆದಿತ್ತು. ಕಳೆದ ವರ್ಷ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಐದು ಸ್ಥಾನಗಳನ್ನು ಗೆದ್ದಿತ್ತು.

ಎಎಪಿಯ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13 ರೊಳಗೆ ಸೂಕ್ತ ಆದೇಶಗಳನ್ನು ನೀಡುವಂತೆ ಕಳೆದ ವಾರ, ಕರ್ನಾಟಕ ಹೈಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನಂತರ ಏಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಬೇಕು ಎಂದು ವಿವರಣೆ ಕೇಳಿ, 2019 ಜುಲೈನಲ್ಲಿ ಎನ್ ಸಿಪಿ, ಟಿಎಂಸಿ ಮತ್ತು ಸಿಪಿಐ ಪಕ್ಷಗಳಿಗೆ ಆಯೋಗ ನೋಟಿಸ್ ನೀಡಿತ್ತು. ಚುನಾವಣಾ ಚಿಹ್ನೆಗಳು (ಮೀಸಲಾತಿ ಮತ್ತು ಹಂಚಿಕೆ) ಆದೇಶ 1968ರ ಪ್ಯಾರಾ 6ಬಿ ಅಡಿಯಲ್ಲಿ ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಮಾನ್ಯತೆ ಪಡೆದ ಪಕ್ಷವಾಗಿದ್ದರೆ ರಾಷ್ಟ್ರೀಯ ಪಕ್ಷವೆಂದು ಪರಿಗಣಿಸಲು ಅರ್ಹವಾಗಿದೆ.