PoliticsBusinessEducationTechnologyEntertainmentSportsHealthFeatureTravelingBeauty TipsRecipes Tips

ಮಾಂಸಕ್ಕಾಗಿ ರಾಷ್ಟ್ರ ಪಕ್ಷಿ ಹತ್ಯೆ: ಆರೋಪಿ ಬಂಧನ

 

ಬೆಳಗಾವಿ: ಮಾಂಸಕ್ಕಾಗಿ ರಾಷ್ಟ್ರ ಪಕ್ಷಿಗೆ ವಿಷ ಉಣಿಸುವ ಕೆಲಸಕ್ಕೆ ಪಾಪಿಗಳು ಮುಂದಾಗಿದ್ದ ಗ್ಯಾಂಗ್​​ನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ನಿವಾಸಿ ಮಂಜುನಾಥ ಪವಾರ್ ಬಂಧಿತ ಆರೋಪಿ. ಇನ್ನೂ ಇಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದು ಅವರ ಬಂಧನಕ್ಕೆ ಎರಡು ತಂಡಗಳನ್ನು ಮಾಡಿ ಹುಡುಕಾಟ ನಡೆಸಿಲಾಗುತ್ತಿದೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ರೈತರು ತಮ್ಮ ಜಮೀನಿಗೆ ಹೋಗಿದ್ದರು. ಜಮೀನಿನಲ್ಲಿ ಅಲ್ಲೊಂದು ಇಲ್ಲೊಂದು ನವಿಲುಗಳು ಸತ್ತು ಬಿದ್ದಿರುವುದನ್ನ ಕಂಡು ಶಾಕ್ ಆಗಿದ್ದರು. ಕೂಡಲೇ ಅರಣ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಇನ್ನೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.