PoliticsBusinessEducationTechnologyEntertainmentSportsHealthFeatureTravelingBeauty TipsRecipes Tips

ತ್ರಿಕೋನ ಪ್ರೇಮ ಕಹಾನಿಗೆ ಬೆಳಗಾವಿ ಕೊತ..ಕೊತ...: ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿದ ಪುಂಡರ ದಾಳಿ

 

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿದ ಪುಂಡರು ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲಿ ತ್ರಿಕೋನ ಪ್ರೇಮ ಕಥೆಯೊಂದು ಹಿಂಸಾಚಾರಕ್ಕೆ ತಿರುಗಿದೆ.

ಪ್ರೀತಿಯ ವಿಚಾರಕ್ಕೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಸೋಮವಾರ ರಾತ್ರಿ ಗಲಾಟೆ ನಡೆದಿದೆ. ಪ್ರೀತಿ ವಿಚಾರವಾಗಿ ಬಾದರವಾಡಿ ಮತ್ತು ನಾವಗೆ ಗ್ರಾಮದ ಯುವಕರ ನಡುವೆ ಗಲಾಟೆ ನಡೆದಿದೆ. ಒಂದು ಹುಡುಗಿಯನ್ನು ಇಬ್ಬರು ಹುಡುಗರು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಈ ವಿಚಾರಕ್ಕೆ ಗಲಾಟೆ ನಡೆದಿದೆ.

ಡಿಸೆಂಬರ್ 31ರ ರಾತ್ರಿ ಪ್ರೀತಿ ವಿಚಾರವಾಗಿ ಬಾದರವಾಡಿ ಮತ್ತು ನಾವಗೆ ಗ್ರಾಮದ ಯುವಕರ ನಡುವೆ ಗಲಾಟೆ ನಡೆದಿತ್ತು. ನಂತರ ಗ್ರಾಮದ ಮುಖಂಡರು ಮಧ್ಯ ಪ್ರವೇಶಿಸಿ ಜಗಳ ಬಿಡಿಸಿದ್ದರು. ನಂತರ ನಾವಗೆ ಗ್ರಾಮದ ಯುವಕರು ಬಾದರವಾಡಿ ಯುವಕರಿಗೆ ನಿಮ್ಮನ್ನು ನೋಡಿಕೊಳ್ಳುತ್ತೇವೆ ಎಂದು ವಾರ್ನಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಾದರವಾಡಿ ಗ್ರಾಮದ ಯುವಕರು ನಾವಗೆ ಗ್ರಾಮಕ್ಕೆ ನುಗ್ಗಿ ದಾಂದಲೆ ನಡೆಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಂದೂಕು, ಮಾರಕಾಸ್ತ್ರಗಳ ಸಮೇತ ಬಂದಿದ್ದ 30ಕ್ಕೂ ಹೆಚ್ಚು ಮುಸುಕುಧಾರಿಗಳು ಗ್ರಾಮದ ನಾಲ್ಕು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿಗಳ ಪತ್ತೆಗೆ ಮೂರು ಪ್ರತ್ಯೇಕ ತಂಡ ರಚಿಸಲಾಗಿದ್ದು, ಗ್ರಾಮದಲ್ಲಿ ಕೆಎಸ್‌ಆರ್ಪಿ, ಸಿಎಆರ್ ತುಕಡಿ ನಿಯೋಜಿಸಲಾಗಿದೆ.
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.