PoliticsBusinessEducationTechnologyEntertainmentSportsHealthFeatureTravelingBeauty TipsRecipes Tips

ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ತೇಲಿ ನೇಮಕ ಮಾಡಿ ಸರ್ಕಾರ ಆದೇಶ

ಬೆಳಗಾವಿ: ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ತೇಲಿ ಅವರನ್ನು ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಈ ಹಿಂದೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ ಎಸ್.ಎಸ್.ಬಿರಾದಾರ ಅವರನ್ನು ಕಂದಾಯ ಆಯುಕ್ತಾಲಯದ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಂಟಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಅಶೋಕ ತೇಲಿ ಅವರನ್ನು ನೇಮಕ ಮಾಡಲಾಗಿದೆ. ಅಶೋಕ ತೇಲಿ ಅವರು ಈ ಹಿಂದೆ ಬೆಳಗಾವಿ ಹಾಗೂ ಉಪವಿಭಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿ ಲ್ಲಿನ ಆಡಳಿತಾವಧಿಯಲ್ಲಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ,‌ಸರ್ಕಾರಿ ಶಾಲೆಗಳುಗೆ ಅಗತ್ಯ ಸಾಮಗ್ರಿಗಳನ್ನು ಕೊಡುವ ಮೂಲಕ ಜನ ಮನ್ನಣೆ ಪಡೆದುಕೊಂಡಿದ್ದರು.
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.