PoliticsBusinessEducationTechnologyEntertainmentSportsHealthFeatureTravelingBeauty TipsRecipes Tips

ನೇಜಾರು ಬರ್ಬರ ಹತ್ಯೆ ಪ್ರಕರಣ: ಹಂತಕ ಚೌಗುಲೆ ಜಾಮೀನು ಅರ್ಜಿ ವಜಾ

 

ಉಡುಪಿ : ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿ ಚೌಗಲೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಈತ ಜಾಮೀನು ಕೋರಿ ಡಿ.೧೪ರಂದು ಅರ್ಜಿ ಸಲ್ಲಿಸಿದ್ದ. ಇದಕ್ಕೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿದ್ದರು. ಈ ಬಗ್ಗೆ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.