ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿ ಅರಿಯಲು ಪ್ರವಾಸ ಕೈಗೊಳ್ಳಲಾಗಿದೆ. ಈಗ ಬೆಳಗಾವಿಗೆ ತೆರಳಿ ಅಲ್ಲೂ ಕೂಡಾ ವಾಸ್ತವ ಅರಿಯಲಾಗುವುದು. ಪ್ರವಾಸದ ನಂತರ ಸಂಬಂಧ ಪಟ್ಟವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಸಾಲಮನ್ನಾ ಅಷ್ಟು ಸುಲಭದ ಕೆಲಸವಲ್ಲ. ರೈತರ ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಸರ್ಕಾರದ ಗಮನಕ್ಕಿದೆ. ಹೀಗಾಗಿ ಯಾವ ಸಾಲ ಮನ್ನಾ ಮಾಡಬೇಕು ಹಾಗೂ ಹೇಗೆ ಮಾಡಬೇಕೆಂಬುದನ್ನು ಪರಾಮರ್ಶಿಸಲಾಗುವುದು ಎಂದರು.
ಆದರೆ, ಈ ಹಿಂದೆ ಬೇರೆ ರಾಜ್ಯಗಳು ಮಾಡದೇ ಇದ್ದಾಗಲೂ ನಾವು ಸಾಲ ಮನ್ನಾ ಮಾಡಿದ್ದೇವೆ. ಮನಮೋಹನ್ ಸಿಂಗ್ ಅವರ ಸರ್ಕಾರ ಇದ್ದಾಗಲೂ ಮಾಡಿದ್ದೇವೆ. ಈ ವಿಚಾರವನ್ನು ಪರಿಶೀಲಿಸಲಾಗುವುದು ಎಂದರು.