ಪಾಶ್ಚಾಪುರ: 78 ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಪಾಶ್ಚಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಶ್ರೀಮತಿ ಬಾಳವ್ವಾ ಅಡಿಮನಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಗ್ರಾಮಸ್ಥರು ಹಾಜರಿದ್ದರು. ಗ್ರಾಮದ ಬಸ್ ನಿಲ್ದಾಣದ ಬಳಿ ಅಶೋಕ್ ಸ್ತಂಭದಲ್ಲಿ ಉಪಾಧ್ಯಕ್ಷರಾದ ಮಲ್ಲವ್ವಾ ಸುಣಕುಪ್ಪಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮದ ಪ್ರಮುಖರು ಶಾಲಾ ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.