ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಪ್ರಧಾನಿ ಮೋದಿಯವರಿಗೆ ಮಧ್ಯಸ್ಥಿತಿಕೆ ವಹಿಸುವಂತೆ ಶ್ರೀಗಳು ಒತ್ತಾಯಿಸಿ ಬೆನ್ನಲೆಯಲ್ಲಿಪ್ರಧಾನಿ ಕಚೇರಿಯಿಂದ ಸಿಹಿ ಸುದ್ದಿಯೊಂದು ರವಾನೆಯಾಗಿದೆ.
ಸಭೆಯಲ್ಲಿ ಇಂದು ಪ್ರಧಾನಿ ಮೋದಿ ಹಾಗೂ ಸಿಎಂ ಮಹತ್ವದ ತೀರ್ಮಾಣ ಕೈಗೊಳ್ಳಿದ್ದು, ಕೋರ್ಟ್ ಆದೇಶಕ್ಕೆ ಸರ್ಕಾರ ಯಾವ ರೀತಿ ಉತ್ತರ ನೀಡುತ್ತದೆ ಎಂಬುವುದೇ ರೋಚಕವಾಗಿದೆ.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಸಬೇಕೆಂಬ ಹೋರಾಟಕ್ಕೆ ಸ್ಪಂಧಿಸಬೇಕೆಂದು ಕೂಡಲಸಂಗಮದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಪ್ರಧಾನಿಯವರಿಗೆ ಸಂದೇಶ ರವಾನಿಸಿದ್ದರು. ಈ ಬಗ್ಗೆ ಪ್ರಧಾನಿ ಕಚೇರಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಯುಗಾದಿಯ ದಿನದಂದು ಸಂಜೆ ಪ್ರಧಾನಿ ಕಾರ್ಯಾಲಯದಿಂದ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ಕರೆ ಬಂದಿದ್ಮು, ಮೀಸಲಾತಿ ಕುರಿತ ತಮ್ಮ ಮನವಿಯನ್ನು ಪರಿಶೀಲಿಸುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕುಎಂದು ಒತ್ತಾಯಿಸಿ ಎರಡು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಈ ಹಿಂದೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಬೇಡಿಕೆ ಈಡೇರಿಸುವುದಾಗಿ ತಾಯಿ ಮೇಲೆ ಆಣೆ ಮಾಡಿ ಭರವಸೆ ನೀಡಿದ್ದಾರೆ ಎಂದು ಹೇಳುತ್ತಿರುವ ಬಸವಜಯ ಮೃತ್ಯುಂಜಯ ಶ್ರೀಗಳು, ಅನಂತರ ಸಿಎಂ ಅವರು ಮಾತು ಮರೆತಿದ್ದಾರೆ ಎಂದು ಅಸಮಾಧಾನಗೊಂಡಿದ್ದಾರೆ. ಇದೀಗ 68 ದಿನಗಳಿಂದ ನಿರಂತರ ಸತ್ಯಾಗ್ರಹ ಕೈಗೊಂಡಿರುವ ಶ್ರೀಗಳು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿದ್ದರು.
ಪ್ರಧಾನಿ ಮೋದಿಯವರ ಸಾಮಾಜಿಕ ಕಳಕಳಿಯ ಕಾರಣ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಭರವಸೆ ಇದೆ ಶ್ರೀಗಳು ಹೇಳಿದ್ದರು.