ಎಂಇಎಸ್ ಮುಖಂಡರ ಪೊಲೀಸರ ವಶಕ್ಕೆ

ಎಂಇಎಸ್ ಮುಖಂಡರ ಪೊಲೀಸರ ವಶಕ್ಕೆ

ಬೆಳಗಾವಿ:ಅಧಿವೇಶನಕ್ಕೆ ಒಂದು ದಿನ ಮುಂಚೆಯೇ ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ಮುಂದಾಗಿತ್ತು.ಬೆಳಗಾವಿಯಲ್ಲಿ ಪ್ರತಿ ಬಾರಿ ಅಧಿವೇಶನ ನಡೆಯುವಾಗಲೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕ್ಯಾತೆ ತೆಗೆಯುವುದು ಸಾಮಾನ್ಯವಾಗಿ ಹೋಗಿದ್ದು, ಈ ಬಾರಿಯೂ ಸಂಭಾಜಿ ವೃತ್ತದ ಬಳಿ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಧಿವೇಶನಕ್ಕೆ ಒಂದು ದಿನ ಮುಂಚೆಯೇ ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಗೊಂದಲಗಳು ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಮಹಾಮೇಳಾವಕ್ಕೆ ಬ್ರೇಕ್ ಹಾಕಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.