This is the title of the web page
This is the title of the web page

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಪ್ರಭಾ ಆಯ್ಕೆ

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಪ್ರಭಾ ಆಯ್ಕೆ

 

ಬೆಳಗಾವಿ: ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಘಟಕ ವತಿಯಿಂದ ಮಹಿಳಾ ಸಾಧಕಿಯರಿಗೆ ಪ್ರತಿ ವರ್ಷ ಕೊಡಮಾಡುವ ” ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ” ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಅಥಣಿಯ ಕವಯಿತ್ರಿ , ಲೇಖಕಿ, ಅನುವಾದಕಿ ಪ್ರಭಾ ಬಾಳಕೃಷ್ಣ ಬೋರಗಾಂವಕರ ಅವರು ಆಯ್ಕೆಯಾಗಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತ ಶೈಕ್ಷಣಿಕ, ಸಾಹಿತ್ಯ ಸೇವೆ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಜ ೩ ರಂದು ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗಾಗಿ ಆಯ್ಕೆ ಮಾಡಿದ್ದಾರೆ. ಮೂರು ಸೃಜನಶೀಲ ಸಾಹಿತ್ಯ ಹಾಗೂ ಮೂರು ಮರಾಠಿಯಿಂದ ಕನ್ನಡಕ್ಕೆ ಅನುವಾದ ಮಾಡಿದ ಹಿರಿಮೆ ಇವರದು.

ಅನೇಕ ಲೇಖನಗಳು ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.ಅವರ ಕೃತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು, ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದಿಂದ ದತ್ತಿ ನಿಧಿ ಪ್ರಶಸ್ತಿ ಲಭಿಸಿವೆ. ಕರ್ನಾಟಕ ರಾಜ್ಯ ಶಿಕ್ಷಕರ ಸಂಘ ಹಾಗೂ ಅನೇಕ ಸಂಘ – ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಅಂಗವಾಗಿ 3 ಜನೆವರಿ 2024 ರಂದು ವಿಜಯಪುರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಬಸವರಾಜ ಗಂಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ