This is the title of the web page
This is the title of the web page

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಓರ್ವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ : ಅಧ್ಯಕ್ಷ ಡಿ ಕೆಂಪಣ್ಣ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ  ಬಂದ ಮೇಲೂ ಓರ್ವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ : ಅಧ್ಯಕ್ಷ ಡಿ ಕೆಂಪಣ್ಣ

 

ಬೆಳಗಾವಿ : ಸುವರ್ಣ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸರ್ಕಾರ ವಿವಿಧ ಇಲಾಖೆಯಗಳಲ್ಲಿ ಗುತ್ತಿಗೆದಾರರು ನಿರ್ವಹಿಸಿರು ಕಾಮಗಾರಿಗಳ ಬಿಲ್ಲುಗಳು ಕಳೆದ ಹಲವಾರು ವರ್ಷಗಳಿಂದ ಪಾವತಿಯಾಗದೇ ಜಿಲ್ಲೆಯ ಗುತ್ತಿಗೆದಾರರು ತೀವ್ರವಾದ ಆರ್ಥಿಕ ಸಂಕಷ್ಟಕ್ಕೆ ಒಳದ್ಗಿದ್ದಾರೆ. ಕೆಲವೊಂದು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಕಾಮಗಾರಿ ಪೂರ್ಣಗೊಳಿಸಿದ.
ಪೂರ್ಣಗೊಂಡ ಕಾಮಗಾರಿಗಳ ಬಿಲ್‌ ಪಾವತಿಸುವುದು ಹಾಗೂ ಜಿಎಸ್‌ಟಿ ಶೇ.12ರಿಂದ ಶೇ.18ಕ್ಕೆ ಏರಿಕೆಯಾಗಿರುವುದರಿಂದ ಹೆಚ್ಚುವರಿಯಾದ ಶೇ. 6ರಷ್ಟು ಜಿಎಸ್‌ಟಿಯನ್ನು ಸರ್ಕಾರವೇ ಭರಿಸುವುದು ಹಾಗೂ ಶೀಘ್ರವೇ ಅನುದನಾದ ಬಿಡುಗಡೆ ಮಾಡುವುದು ಸೇರಿದಂತೆ ಇನ್ನೀತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಬೆಳಗಾವಿ ಜಿಲ್ಲಾ ಕಾರ್ಯನಿರತ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಇಲ್ಲಿನ ಸುವರ್ಣ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಗುತ್ತಿಗೆದಾರರಿಗೆ ಶೀಘ್ರವಾಗಿ ಹಣ ಬಿಡುಗಡೆ ಮಾಡಬೇಕು. ಪ್ಯಾಕೇಜ್‌ ಪದ್ದತಿಯಲ್ಲಿ ಟೆಂಡರ್ ಕರೆಯಲಾಗುತ್ತಿದ್ದು, ಅದನ್ನು ಹಿಂಪಡೆದು ಸಣ್ಣ ಮೊತ್ತದ ಕಾಮಗಾರಿಗಳನ್ನಾಗಿ ಮಾಡಿ ಮರುಟೆಂಡರ್ ಕರೆಯಬೇಕು.
ಬೇರೆ ಬೇರೆ ಇಲಾಖೆಗಳಲ್ಲಿ ಟೆಂಡರ್‌ ಷರತ್ತು ವಿಭಿನ್ನವಾಗಿದ್ದು, ಅವುಗಳನ್ನು ಎಲ್ಲಾ ಇಲಾಖೆಗಳಲ್ಲಿ ಏಕರೂಪದ ನಿಯಮ ಜಾರಿಗೆ ತೆರಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೂ ಓರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ, ಸಂಘದ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿರಂತರವಾಗಿ ನಡೆಯುತ್ತದೆ. ಸರ್ಕಾರ ಬಂದು ಎಂಟು ತಿಂಗಳು ಆಗಿದೆ. ಇನ್ನೂ ಕೆಲಸಗಳೂ ಆರಂಭಗೊಂಡಿಲ್ಲ. ಹೀಗಾಗಿ ಈಗಲೇ ಏನೂ ಹೇಳಲು ಸಾಧ್ಯವಿಲ್ಲ‌. ಕೆಲಸಗಳು ಆರಂಭವಾಗಲಿ. ಇವರು ಹಣೆಬರಹ ಗೊತ್ತಾಗುತ್ತದೆ ಎಂದರು.
ನಮ್ಮ ಸಂಘದ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುತ್ತೇವೆ. ಬೆಳಗಾವಿಯಲ್ಲಿ ಆಗಿದೆ. ಮುಂದೆ ಕಲಬುರ್ಗಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಕೆಂಪಣ್ಣ ಆಗ್ರಹಿಸಿದರು.ಕೆಲ ಗುತ್ತಿಗೆದಾರ ಚೇಲಾಗಳು ಕೆಲವು ಸಚಿವರ ಏಜೆಂಟರಂತೆ ವರ್ತಿಸುತ್ತಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿಗಳ ಭೇಟಿ ಮಾಡಿದಾಗ ಹೆಸರು ಹೇಳುತ್ತೇನೆ ಎಂದು ಹೇಳಿದರು.ಗುತ್ತಿಗೆದಾರರ ಸಂಘದ ಕಷ್ಟಗಳು ಮುಂದುವರೆದಿವೆ. ಸರ್ಕಾರ ಸ್ಪಂದಿಸುತ್ತಿದೆ.

ಸಂದರ್ಭದಲ್ಲಿ ಗೌರವಾಧ್ಯಕ್ಷ ಬಸವರಾಜ ಮಟಗಾರ . ಆರ್ ಡಿ ಪದ್ಮಣ್ಣವರ್
ಎಸ್ ಆರ್ ಗುಳ್ಳಪ್ಪನವರ. ಎಸ್ ಸಿ ಗುಡಸಿ. ಸಿ ಎಂ ಜಾನ್ ಗುತ್ತಿಗೆದಾರರು ಭಾಗವಹಿಸಿದ್ದರು.