ದೇಶದ ಆಡಳಿತದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕಾರಣ.: ಪ್ರಧಾನಿ ಮೋದಿ

ದೇಶದ ಆಡಳಿತದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕಾರಣ.: ಪ್ರಧಾನಿ ಮೋದಿ

 

ಬಳ್ಳಾರಿ, ಮೇ 05:ದೇಶದ ಆಡಳಿತದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕಾರಣವಾಗಿದೆ. ಸುಳ್ಳು ಸರ್ವೇ ಮತ್ತು ಸುಳ್ಳು ಸುದ್ದಿ ಸೃಷ್ಟಿ ಮಾಡಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ಆಗದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ನಿಷೇಧ ಮತ್ತು ತುಷ್ಟೀಕರಣ ಬಂಡಲ್ ಆಗಿದೆ. ಪ್ರಣಾಳಿಕೆಯಲ್ಲಿ ರದ್ದು ಮಾಡಬೇಕು,

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸದ್ಯ ಕರ್ನಾಟಕ ಪ್ರವಾಸದಲ್ಲಿದ್ದು, ಇಂದು(ಮೇ 05) ಬಳ್ಳಾರಿಗೆ ಆಗಮಿಸಿದ್ದಾರೆ. ಸಾವಿರಾರು ಜನರು ಪ್ರಧಾನಿ ಮೋದಿ ಸಮಾವೇಶದಲ್ಲಿ ಭಾಗಿಯಾಗಿದ್ದು, ಮೋದಿ ಕೈ ಬೀಸುತ್ತಿದ್ದಂತೆ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು.

ಬಳ್ಳಾರಿಯಲ್ಲಿ ನಡೆದ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ನಾಯಕರು ಬಳ್ಳಾರಿ ನಗರದ ಅಧಿದೇವತೆ ಆಗಿರುವ ಕನಕ ದುರ್ಗಮ್ಮ ದೇವಿಯ ಮೂರ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಗೆ ನೆನಪಿನ ಕಾಣಿಕೆಯಾಗಿ ನೀಡಿದರು.

ಬಳ್ಳಾರಿ ಸಮಾವೇಶದಲ್ಲಿ ಭಜರಂಗ ಬಲಿ, ಆಂಜನೇಯ ಸ್ವಾಮಿಗೆ ಘೋಷಣೆ ಕೂಗುವುದರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು. ಬಳ್ಳಾರಿಯ ನನ್ನ ಸಹೋದರರ ಸಹೋದರಿಯರಿಗೆ ನನ್ನ ಸಮಸ್ಕಾರ ಎಂದು ಕನ್ನಡದಲ್ಲಿ ಹೇಳಿದ ಪ್ರಧಾನಿ ಮೋದಿ, ದುರ್ಗಮ್ಮ, ಕುಮಾರಸ್ವಾಮಿ ದೇವರಿಗೆ ನಮಸ್ಕರಿಸಿದರು.