ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಸಂಚು : ಪ್ರಧಾನಿ ಮೋದಿ ಹೇಳಿಕೆ

ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಸಂಚು : ಪ್ರಧಾನಿ ಮೋದಿ ಹೇಳಿಕೆ

 

 

ಚಿಕ್ಕಬಳ್ಳಾಪುರ: ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ದೊಡ್ಡ ಮಟ್ಟದಲ್ಲಿ ಸಂಚು ನಡೆಯುತ್ತಿದೆ. ಆದರೆ, ನನಗೆ ದೇಶದ ತಾಯಂದಿರ ಆಶೀರ್ವಾದ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಇಂದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಎನ್‌ಡಿಎ ಸರ್ಕಾರ ಬದ್ಧವಾಗಿದೆ.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕಿಸಾನ್ ಸಮ್ಮಾನ್‌ ಹಣದ ಜತೆಗೆ 2,000 ರೂ. ಸೇರಿಸಿ 4,000 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಸ್ಥಗಿತಗೊಳಿಸಲಾಯಿತು. ಇದರಿಂದಲೇ ಕಾಂಗ್ರೆಸ್ ರೈತ ವಿರೋಧಿ ಎಂಬುದು ಗೊತ್ತಾಗುತ್ತದೆ.