ಕುಂದಾನಗರಿಯ ಪ್ರಿಯಾಂಕಾ ರಾಜ್ಯಕ್ಕೆ ದ್ವಿತೀಯ ಸ್ಥಾನ

ಕುಂದಾನಗರಿಯ ಪ್ರಿಯಾಂಕಾ ರಾಜ್ಯಕ್ಕೆ ದ್ವಿತೀಯ ಸ್ಥಾನ

 

ಬೆಳಗಾವಿ: ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕುಂದಾನಗರಿಯ ಪ್ರಿಯಾಂಕಾ ಕುಲಕರ್ಣಿ 592 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಲಿಂಗರಾಜ‌ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾಂಕಾ‌ ಕುಲಕರ್ಣಿ ಶೇ.98.6 ರಷ್ಟು ಅಂಕ ಗಳಿಸುವ ಮೂಲಕ ಇಡೀ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಿಯಾಂಕಾ ಕುಲಕರ್ಣಿ 592 ಅಂಕ ಗಳಿಸಿದ್ದು, ಭೂಗರ್ಭ ಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ‌ ಗಳಿಸಿದ್ದಾರೆ. ಅರ್ಥಶಾಸ್ತ್ರ 98, ಇತಿಹಾಸ 98, ರಾಜಕೀಯ ಶಾಸ್ತ್ರ 99, ಇಂಗ್ಲೀಷ್​ 99,‌ ಹಿಂದಿ 98 ಅಂಕಗಳನ್ನು ಪಡೆದಿದ್ದಾರೆ. ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಮನೆಯಲ್ಲಿ ಸಂಭ್ರಮ ಸಡಗರ ಮನೆ ಮಾಡಿತ್ತು. ಈ ವೇಳೆ ತಂದೆ – ತಾಯಿ, ಅಜ್ಜಿ ಸಿಹಿ ತಿನಿಸಿ ಖುಷಿ ಪಟ್ಟರು.