ಬೆಳಗಾವಿ: ಕೃಷಿ ಮಸೂದೆ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಸುರ್ವಣ ಸೌಧ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ಇಲ್ಲಿನ ಚನ್ನಮ್ಮ ವೃತ್ತದಲ್ಲಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಮಾಡಿದರು. ಬಿಜೆಪಿ ಸರಕಾರದ ಅವಧಿಯಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಮಸೂದೆಯಿಂದ
ರೈತರ ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದ್ದಾರೆ. ಆಡಳಿತದ ಕಾಂಗ್ರೆಸ್ ಸರ್ಕಾರ ಈ ಅಧಿವೇಶನದಲ್ಲಿ ಹಿಂಪಡೆಯಬೇಕು. ರೈತರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಸಿಎಂ ಸಿದ್ದರಾಮಯ್ಯನವರು ಕೃಷಿಯಲ್ಲಿ ಹೆಚ್ಚಿನ ತೆರಿಗೆ ಸಂಗ್ರಹವಾಗುತ್ತಿದೆ ಎಂದುಕೊಂಡು ಈ ಕಾಯ್ದೆಯನ್ನು ಹಿಂಪಡೆಯಲು ಸಾಧ್ಯವಾಗುತ್ತಿಲ್ಲವೆ ಎಂದು ಪ್ರಶ್ನಿಸಿದರು.
ಭೀಕರ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮಾತ್ರ ಚುನಾವಣೆಯಲ್ಲಿ ಮಗ್ನವಾಗಿದೆ, ಅಂಗೀಕಾರವಾದ ಕೃಷಿ ಮಸೂದೆ ಹಿಂಪಡೆಯುವಲ್ಲಿ ದಿಟ್ಟ ನಿರ್ಧಾರ ಮಾಡಲಿ ಎಂದರು
ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ ನೇತ್ರತ್ವದಲ್ಲಿ ಪ್ರತಿಭಟನೆ