ನವದೆಹಲಿ: ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ, ಜಾರಿ ನಿರ್ದೇಶನಾಲಯದ ಹಿಂದೆ ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಭೇಟಿ ಮಾಡಲಿದ್ದು, ಭೇಟಿ ವೇಳೆ ಕಾನೂನು ನೆರವು ನೀಡುವ ಭರವಸೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಯವರು ಇಂದು (ಶುಕ್ರವಾರ) ಅರವಿಂದ್ ಕೇಜ್ರಿವಾಲ್ ಅಥವಾ ಅವರ ಕುಟುಂಬವನ್ನು ಅವರು ಭೇಟಿಯಾಗುವ ಸಾಧ್ಯತೆಗಳಿವೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಮಡೆದುಕೊಂಡರು. ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ ಅಧಿಕಾರಿಗಳು. ಇಡಿ ಪ್ರಧಾನ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆಂದು ತಿಳಿದುಬಂದಿದೆ