ಏಪ್ರಿಲ್ 17 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ, ರಾಜ್ಯಕಾಂಗ್ರೆಸ್ ಭರ್ಜರಿ ತಯಾರಿ ನಾಲ್ಕು ಲಕ್ಷ ಜನ ಸೇರುವ ನಿರೀಕ್ಷೆ ಇದೆ: ಡಿಕೆ ಶಿವಕುಮಾರ್

ಏಪ್ರಿಲ್ 17 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ, ರಾಜ್ಯಕಾಂಗ್ರೆಸ್ ಭರ್ಜರಿ ತಯಾರಿ ನಾಲ್ಕು ಲಕ್ಷ ಜನ ಸೇರುವ ನಿರೀಕ್ಷೆ ಇದೆ: ಡಿಕೆ ಶಿವಕುಮಾರ್

 

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.

ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಶಿವಕುಮಾರ್, ರಾಹುಲ್ ಗಾಂಧಿ ಅವರು ಬುಧವಾರ ಮಧ್ಯಾಹ್ನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಮಂಡ್ಯಕ್ಕೆ ತೆರಳಲಿದ್ದಾರೆ ಎಂದರು.ನಂತರ ರಾಹುಲ್ ಗಾಂಧಿ ಅವರು ಮಂಡ್ಯದಿಂದ ಕೋಲಾರಕ್ಕೆ ತೆರಳಿ ಅಲ್ಲಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಡಿಸಿಎಂ ತಿಳಿಸಿದ್ದರು.