This is the title of the web page
This is the title of the web page

ರಾಮೇಶ್ವರಂ ಕೆಫೆ ಸ್ಫೋಟ: ಮಾಧ್ಯಮದ ಮಿತ್ರರು ತನಿಖೆಯ ವಿವರಗಳನ್ನು ಅಥವಾ ಕಪೋಲಕಲ್ಪಿತ ವರದಿಗಳನ್ನು ಬಿತ್ತರಿಸದಿರಿ.ಮಾಧ್ಯಮಗಳಿಗೆ ಪೊಲೀಸರ ಕಿವಿಮಾತು

ರಾಮೇಶ್ವರಂ ಕೆಫೆ ಸ್ಫೋಟ: ಮಾಧ್ಯಮದ ಮಿತ್ರರು ತನಿಖೆಯ ವಿವರಗಳನ್ನು ಅಥವಾ ಕಪೋಲಕಲ್ಪಿತ ವರದಿಗಳನ್ನು ಬಿತ್ತರಿಸದಿರಿ.ಮಾಧ್ಯಮಗಳಿಗೆ ಪೊಲೀಸರ ಕಿವಿಮಾತು

 

ಬೆಂಗಳೂರು, ಮಾರ್ಚ್ 03:ಭಾನುವಾರ ಬೆಂಗಳೂರು ನಗರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, “ಮಾಧ್ಯಮದ ಮಿತ್ರರಲ್ಲಿ ವಿನಂತಿ, ತನಿಖೆಯ ವಿವರಗಳನ್ನು ಅಥವಾ ಕಪೋಲಕಲ್ಪಿತ ವರದಿಗಳನ್ನು ಬಿತ್ತರಿಸದಿರಿ. ತನಿಖಾ ತಂಡಗಳು ಸ್ವತಂತ್ರವಾಗಿ ಮತ್ತು ವೃತ್ತಿಪರವಾಗಿ ಕೆಲಸ ಮಾಡಲು ಅನುವು ಮಾಡಿಕೊಡಿ” ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಸಿಸಿಬಿ ಪೊಲೀಸರು ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಾಧ್ಯಮಗಳಲ್ಲಿ ತನಿಖೆಯ ಕುರಿತು ಸರಣಿ ವರದಿಗಳು ಬರುತ್ತುವೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಕಿವಿಮಾತು ಹೇಳಿದ್ದಾರೆ.

ಶನಿವಾರ, “ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದೆ”