ಖಾನಾಪುರ: ಶಾಲೆಗಳಿಗೆ ಶನಿವಾರ(ಜು.೨೨) ರಜೆ ಘೋಷಣೆ

ಖಾನಾಪುರ: ಶಾಲೆಗಳಿಗೆ ಶನಿವಾರ(ಜು.೨೨) ರಜೆ ಘೋಷಣೆ

 

ಬೆಳಗಾವಿ, ಜು.೨೧(ರ‍್ನಾಟಕ ವರ‍್ತೆ): ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಶನಿವಾರ (ಜು‌.೨೨) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಕಳೆದ ಮರ‍್ನಾಲ್ಕು ದಿನಗಳಿಂದ ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ.

ಫಾಲ್ಸ್ ಭೇಟಿಗೆ ನರ‍್ಬಂಧ:

ಖಾನಾಪುರ ತಾಲ್ಲೂಕಿನ ಚಿಕಲೆ, ಪಾರವಾಡ ಹಾಗೂ ಚಿಗುಲೆ ವಾಟರ್ ಫಾಲ್ಸ್ ಗಳನ್ನು ಹೊರತುಪಡಿಸಿ ಖಾನಾಪುರ ತಾಲ್ಲೂಕಿನ ಇತರೆ ಎಲ್ಲ ಫಾಲ್ಸ್ ಗಳಿಗೆ ಸರ‍್ವಜನಿಕರ ಭೇಟಿಯನ್ನು ನರ‍್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸರ‍್ವಜನಿಕರ ಸುರಕ್ಷತೆ ದೃಷ್ಟಿಯಿಂದ ಇನ್ನುಳಿದ ಫಾಲ್ಸ್ ಗಳಿಗೆ ಭೇಟಿಯನ್ನು ನರ‍್ಬಂಧಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ