ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದ್ದು, ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದುಬಂದಿದೆ. ಈ ಗ್ಗೆ ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ.
ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ.
ಇದರೊಂದಿಗೆ ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಯಾದಂತಾಗಿದೆ. ಇನ್ನು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಸರಣಿ ಸಭೆಗಳನ್ನು ಮಾಡುವ ಮೂಲಕ ಮುಂದಿನ ಲೋಕಾಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಿದೆ. ಇದರೊಂದಿಗೆ ಕರ್ನಾಟಕ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ.
ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ
ಇನ್ನು ದೆಹಲಿಯಲ್ಲಿ ಸಿದ್ದರಾಮಯ್ಯನವರ ಅಧಿಕೃತ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಇತ್ತ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಸಿದ್ದರಾಮಯ್ಯನವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಂಠೀರವ ಸ್ಟುಡಿಯೋನಲ್ಲಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶನಿವಾರ 18) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೀಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್ಗಳನ್ನು ಹಾಕಿಸುತ್ತಿದ್ದಾರೆ. ಇನ್ನು ಕಂಠೀರವ ಕ್ರೀಡಾಂಗಣದಲ್ಲಿ 50 ಸಾವಿರಾರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಗಣ್ಯರು, ಶಾಸಕರು, ಪಕ್ಷದ ಮುಖಂಡರಿಗೆ ಪತ್ಯೇಕ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಎಲೆಕ್ಷನ್ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಒಂದು ತಿಂಗಳು ರಾಜ್ಯದಲ್ಲೇ ಪ್ರಚಾರ, ಸಭೆ ಹಾಗೂ ಸಮಾವೇಶಗಳನ್ನು ಕೈಗೊಂಡು ಮತಯಾನೆ ಮಾಡಿದ್ದರು. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಚುನಾವಣೆಗೆ ಹೆಚ್ಚು ಸಹಕಾರಿಯಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ಡೈನಾಮಿಕ್ ಹಿರೋ ಆಗಿ ಪಕ್ಷವನ್ನು ಮುನ್ನಡೆಸಿದ್ದಾರೆ. ಶಿವಕುಮಾರ್ಗೆ ರಾಜ್ಯದ ಉಪಮುಖ್ಯಮಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೂಡ ನೀಡಲಾಗಿದೆ ಎಂದಿದ್ದಾರೆ.