This is the title of the web page
This is the title of the web page

ನಾಳೆಯಿಂದ ಸಿದ್ದು ಯುಗಾರಂಭ: ರಾಜ್ಯಾದ್ಯಂತ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಪ್ರಮಾಣ ವಚನ ಕೌತುಕ ಕ್ಷಣ..?

ನಾಳೆಯಿಂದ ಸಿದ್ದು ಯುಗಾರಂಭ: ರಾಜ್ಯಾದ್ಯಂತ ಸಂಚಲನ ಮೂಡಿಸಿದ ಸಿದ್ದರಾಮಯ್ಯ ಪ್ರಮಾಣ ವಚನ ಕೌತುಕ ಕ್ಷಣ..?

 

ಸಿದ್ದುಗೆ ಕಿರಿಟ , ಮುಗ್ಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ

ಬೆಂಗಳೂರು: ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು:

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.

2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ ನಡೆಸಲಿದ್ದಾರೆ.

ಮುಗ್ಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ:
ಕುಮಾರಕೃಪಾ ಬಳಿ ಇರುವ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಒಂದು ಕೆಎಸ್ ಆರ್ ಪಿ ವಾಹನ ಸೇರಿ 70 ಕ್ಕೂ ಹೆಚ್ಚು ಮಂದಿಯನ್ನು ನಿಯೋಜನೆ ಮಾಡಲಾಗಿದೆ.ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡುತ್ತಿರುವ ಹಿನ್ನೆಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಬೆಂಗಳೂರಿನ ಹಲವು ಕಡೆ ಸಿದ್ದರಾಮಯ್ಯ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಇಂದು ರಾಹುಲ್ ಗಾಂಧಿ ಭೇಟಿ ಬಳಿಕ ‘ಸಿದ್ದರಾಮಯ್ಯ ಸಿಎಂ’ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಲಿ ಎಂದು ಈ ಹಿಂದೆ ರಾಹುಲ್ ಗಾಂಧಿ ಒಲವು ವ್ಯಕ್ತಪಡಿಸಿದ್ದರು. ಇಂದು ಹೈ ವೋಲ್ಟೇಜ್ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.