This is the title of the web page
This is the title of the web page

ಕರ್ನಾಟಕ ಕದನಕ್ಕೆ ಮಹೊರ್ತ ಪಿಕ್ಸ್: ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಕರ್ನಾಟಕ ಕದನಕ್ಕೆ ಮಹೊರ್ತ ಪಿಕ್ಸ್: ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

 

ಮತದಾರರಿಗೆ ಸುವರ್ಣಲೋಕ ದಿನಪತ್ರಿಕೆ ಸಂಪೂರ್ಣ ಮಾಹಿತಿ

ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡಲು ಕೇಂದ್ರ ಚುನಾವಣಾ ಆಯೋಗ ಅವಕಾಶ

 

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕದನಕ್ಕೆ ಮಹೊರ್ತ ಪಿಕ್ಸ್ ಆಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡಲು ಕೇಂದ್ರ ಚುನಾವಣಾ ಆಯೋಗ ಅವಕಾಶ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮನೆಯಲ್ಲಿ ಮತದಾನ ಪ್ರಕ್ರಿಯೆ ಹೇಗಿರಲಿದೆ ಎನ್ಜುವ ಮಾಹಿತಿ ಇಲ್ಲಿದೆ:

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ,

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆರಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.

ಮನೆಯಿಂದ ಮತದಾನ ಮಾಡಿ;
ಚುನಾವಣೆ ಆಯೋಗದ ವೆಬ್‌ ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯ. ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ
ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ
ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ
ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ