ಬೆಂಗಳೂರು: ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.