This is the title of the web page
This is the title of the web page

ಎಎಪಿ ಸಂಸದ ಸಂಜಯ್ ಸಿಂಗ್ ಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು

ಎಎಪಿ ಸಂಸದ ಸಂಜಯ್ ಸಿಂಗ್ ಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು

 

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕಳೆದ ವರ್ಷ ಅಕ್ಟೋಬರ್ 4 ರಂದು ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು ಮತ್ತು ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಗೆ ಜಾರಿ ನಿರ್ದೇಶನಾಲಯ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಇಡಿಗೆ ತೀಕ್ಷ್ಣವಾದ ಪ್ರಶ್ನೆಗಳನ್ನು ಕೇಳಿದ್ದು, ಸಿಂಗ್ ಬಂಧನದಲ್ಲಿರಲು ಕಾರಣವೇನು? ಮತ್ತು ಇಷ್ಟು ದಿನ ಬಂಧನದಲ್ಲಿದ್ದಿದ್ದು ಹೇಗೆ ಸಹಾಯಕವಾಯಿತು ಎಂದು ಪ್ರಶ್ನಿಸಿತು. ಅಲ್ಲದೆ ಸಂಜಯ್ ಸಿಂಗ್ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಸರಿಯಾದ ಕಾರಣ, ಲಿಖಿತ ಸಮರ್ಥನೆಯೊಂದಿಗೆ ಬರುವಂತೆ ಇಡಿ ವಕೀಲರಿಗೆ ಸೂಚಿಸಿತ್ತು.