ಬೆಳಗಾವಿ: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಪ್ರಧಾನಿ ಮೋದಿಯವರು ರಾಜ್ಯಕ್ಕೆ ಚೊಂಬು ನೀಡಿದ್ದಾರೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ, ಯಾವುದೇ ನೈತಿಕತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದರು
ಕೇಂದ್ರದಲ್ಲಿ ಮೋದಿ ಸರಕಾರ ೧೫೦ ಸೀಟು ಗೆಲ್ಲುವುದು ಕಷ್ಟ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಬರಬೇಕಾದ 18 ಸಾವಿರ ಕೋಟಿ ರೂ. ಬರ ಪರಿಹಾರ ನೀಡಬೇಕಿದೆ ಏಲಿದೆ ಹಣ, ನಮ್ಮ ತೆರಿಗೆ ಏನಾಯಿತು. ಎಂದು ಪ್ರಶ್ನಿಸಿದರು.
ಕರ್ನಾಟಕಕ್ಕೆ ಅನ್ಯಾಯ ಮಾಡುವುದೇ ಮೋದಿ ಸರ್ಕಾರದ ಡಿಎನ್ಎ. ಕೇಂದ್ರ ಸರ್ಕಾರದ ತಾರತಮ್ಯದ ಬಗ್ಗೆ ಕನ್ನಡಿಗರಲ್ಲಿ ಆಕ್ರೋಶ ಮಡುಗಟ್ಟಿದೆ. ಮೋದಿ ಮತ್ತು ಅಮಿತ್ಶಾಗೆ ಗೋ ಬ್ಯಾಕ್ ಎಂದು ಕನ್ನಡಿಗರು ಹೇಳುವ ವಾತಾವರಣ ಉಂಟಾಗಿದೆ. ಮೇಕೆದಾಟು, ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಮೋದಿಯವರು ಅನುಮತಿ ಕೊಡಿಸಿಲ್ಲ.
ಈ ಸಂದರ್ಭದಲ್ಲಿ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ, ಶಾಸಕರಾದ ಅಶೋಕ ಪಟ್ಟಣ, ಗಣೇಶ್ ಹುಕ್ಕೇರಿ, ಮಹಾಂತೇಶ ಕೌಜಲಗಿ, ಆಸೀಫ್ ( ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಕಾರ್ಯಕರ್ತರು ಇದ್ದರು