ಹುಬ್ಬಳ್ಳಿ: ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಗೆಲುವಿಗೆ ಹಲವು ರಣತಂತ್ರ ರೂಪಿಸುತ್ತಿದೆ. ಇಂದು ರಾತ್ರಿ ಶೆಟ್ಟರ್ ನಿವಾಸಕ್ಕೆ ತೆರಳಿದ ಸುರ್ಜೆವಾಲಾ ಅವರು, ಹುಬ್ಬಳ್ಳಿ – ಧಾರವಾಡ ಸುತ್ತಮುತ್ತಲಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಕುರಿತು ಚರ್ಚಿಸಿದರು ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಗುರುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು
ಬಿಜೆಪಿಯಲ್ಲಿ ಕೆಲವು ಸಜ್ಜನ ರಾಜಕಾರಣಿಗಳನ್ನು ಹೊರಹಾಕುವ ಕೆಲಸ ನಡೆದಿದೆ. ಶೆಟ್ಟರ್ ಅವರು ಆ ಷಡ್ಯಂತ್ರಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರಿದ್ದಾರೆ ಎಂದರು.
ಸುರ್ಜೆವಾಲಾ ಅವರೊಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಧಾರವಾಡ ಜಿಲ್ಲಾ ಚುನಾವಣಾ ಉಸ್ತುವಾರಿ ಪಿ.ವಿ. ಮೋಹನ್, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಮಾಜಿ ಸಂಸದ ಐ.ಜಿ. ಸನದಿ ಸೇರಿದಂತೆ ಹಲವು ಮುಖಂಡರು ಇದ್ದರು.