ಬೆಳಗಾವಿ: ಅನುಮಾನಸ್ಪದವಾಗಿ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ವಿಶಾಲ ಅಪ್ಪಾಸೋ ಹಳಜ್ವಾಳೆ(23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ. ಮೃತ ಯುವಕ ಸಲೂನ್ ಅಂಗಡಿ ಹೊಂದಿದ್ದನು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲಿ ಹಗ್ಗದಿಂದ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





























