ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.
ಜೂನ್ 13 ರಂದು ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 20 ಕೊನೆಯ ದಿನವಾಗಿದೆ. ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.





























