This is the title of the web page
This is the title of the web page

ಬೈಲಹೊಂಗಲ ತಾಲ್ಲೂಕಿನ ಬೇವಿನಕೊಪ್ಪ-ಸಂಗೊಳ್ಳಿ ಗ್ರಾಮಗಳ ಸಂಪರ್ಕ ಸೇತುವೆ ನದಿಯಲ್ಲಿ ಸಂಪೂರ್ಣ ಮುಳುಗಡೆ

ಬೈಲಹೊಂಗಲ ತಾಲ್ಲೂಕಿನ ಬೇವಿನಕೊಪ್ಪ-ಸಂಗೊಳ್ಳಿ ಗ್ರಾಮಗಳ ಸಂಪರ್ಕ ಸೇತುವೆ ನದಿಯಲ್ಲಿ ಸಂಪೂರ್ಣ ಮುಳುಗಡೆ

ಬೈಲಹೊಂಗಲ- ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿಯ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಬೇವಿನಕೊಪ್ಪ, ಸಂಗೊಳ್ಳಿ ಗ್ರಾಮಗಳ ಸಂಪರ್ಕ ಸೇತುವೆ ನದಿಯಲ್ಲಿ ಸಂಪೂರ್ಣ ಮುಳುಗಡೆ ಆಗಿದೆ. ಇದರಿಂದ ಎರಡು ಗ್ರಾಮಗಳ ನಾಗರಿಕರ ಸಂಪರ್ಕ ಕಡಿತವಾಗಿದೆ. ವಾಹನಗಳ ಓಡಾಟ ಸ್ಥಗಿತಗೊಂಡಿದೆ. ನದಿ ಮದ್ಯದ ಬೇವಿನಕೊಪ್ಪ, ಸಂಗೊಳ್ಳಿ, ಕಿತ್ತೂರು ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ನಿಂತಿದೆ. ನದಿಯ ಒಳ ಹರಿವು ಏರುತ್ತಿರುವುದರಿಂದ ನಯಾನಗರ ಗ್ರಾಮದ ಮಲಪ್ರಭಾ ನದಿಯ ಒಡಲು ತುಂಬಿ ಹರಿಯುತ್ತಿದೆ. ನದಿಯಲ್ಲಿದ್ದ ರೈತರ ಕೆಲ ಪಂಪಸೆಟ್ ಗಳು ಮುಳುಗೊಂಡಿವೆ.