ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪ್ರಬಾವಿ ನಾಯಕ ಡಿ.ಬಿ. ಇನಾಮದಾರ ಕುಟುಂಬ ಕಾಂಗ್ರೆಸ್‌ನಿಂದ ದೂರ ಉಳಿಯಲಾಗುವುದು ಎಂದು ಸೊಸೆ ಮಾದ್ಯಮಗಳಿಗೆ ತಿಳಿಸಿದ್ದಾರೆ.
ಇನ್ನೂ ಸಮಯವಿದೆ ಇನಾಮದಾರ ಕುಟುಂಬಕ್ಕೆ ಟಿಕೆಟ್ ನೀಡಬೇಕು. ಇಲ್ಲವಾದರೆ ಮುಂದಿನ ನಡೆ ತಿಳಿಸಲಾಗುವುದು ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಬಾಬಾಸಾಹೇಬ್ ಪಾಟೀಲ ಅವರನ್ನು ಕಣಕ್ಕಿಳಿಸುವ ನಿರ್ಧಾರ ಹೊರಬೀಳುತ್ತಿದ್ದಂತೆಯೇ ಕಿತ್ತೂರು ಕ್ಷೇತ್ರದಲ್ಲಿ ಬಂಡಾಯದ ಬೆಂಕಿ ಎದಿದೆ. ಇದನ್ನು ಖಂಡಿಸಿ ಡಿ.ಬಿ ಇನಾಮದಾರ್ ಅಭಿಮಾನಿಗಳು ನೇಗಿನಹಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ ಬೆನ್ನಲ್ಲಿಯೇ ಡಿ.ಬಿ ಇನಾಮದಾರ್ ಕುಟುಂಬದ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕವಾಗಿ ರಿಸೈನ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಡಿ.ಬಿ ಇನಾಮದಾರ್ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ.ನಾವು ಅವರ ಪರವಾಗಿ ಹೇಳಿಕೆ ನೀಡುವಷ್ಟು ದೊಡ್ಡವರೂ ಅಲ್ಲ.ಕಾಂಗ್ರೆಸ್ಸಿನ ರಿಸೈನ್ ಮಾಡುವುದು ಕುಟುಂಬದ ಸದಸ್ಯರ ನಿರ್ಧಾರ ಎಂದು ಹೇಳಿದ ಲಕ್ಷ್ಮೀ ಹೇಳಿದರು.
ಕೊನೆಗೆ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ನಿರ್ಧಾರ ಪ್ರಕಟಿಸಿದ್ದು,ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಇಡೀ ಕುಟುಂಬದ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಐದು ಬಾರಿ ಶಾಸಕರಾಗಿದ್ದ ಡಿ.ಬಿ. ಇನಾಮದಾರ, ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಲಕ್ಷ್ಮೀ ಇನಾಮದಾರ ಅವರಿಗೆ ಟಿಕೆಟ್ ಕೈತಪ್ಪಿದ್ದು ಬಾಬಾಸಾಹೇಬ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.