This is the title of the web page
This is the title of the web page

ಬಿಜೆಪಿ- ಜೆಡಿಎಸ್‌ ಮೈತ್ರಿಕೂಟದ ನಿಯಮದಂತೆ ಜಿಡಿಎಸ್ ಕಾರ್ಯಕರ್ತರು ಒಪ್ಪಿಕೊಳ್ಳಲು ಮುಂದಾಗುತ್ತಿಲ್ಲ ..?

ಬಿಜೆಪಿ- ಜೆಡಿಎಸ್‌ ಮೈತ್ರಿಕೂಟದ ನಿಯಮದಂತೆ ಜಿಡಿಎಸ್ ಕಾರ್ಯಕರ್ತರು ಒಪ್ಪಿಕೊಳ್ಳಲು ಮುಂದಾಗುತ್ತಿಲ್ಲ ..?

 

ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಎನ್‌ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಜೆಡಿಎಸ್‌ ಪಕ್ಷ, ಬಿಜೆಪಿಯೊಂದಿಗೆ ಸೀಟು ಹಂಚಿಕೆ ಮಾಡಿಕೊಂಡಿದೆ.ಆದರೆ ಬಿಜೆಪಿ ಕಾರ್ಯಕರ್ತರು ಮಾತ್ರ ಜೆಡಿಎಸ್‌ ಮುಖಂಡರನ್ನು ಕಡೆಗಣಿಸುತ್ತಿದ್ದು, ಜಿಲ್ಲೆಯಲ್ಲಿ ಜೆಡಿಎಸ್‌ ಪರಿಸ್ಥಿತಿ ಅತಂತ್ರವಾಗಿದೆ.

ಬಿಜೆಪಿ- ಜೆಡಿಎಸ್‌ ಮೈತ್ರಿಕೂಟದ ನಿಯಮದಂತೆ ಕಾರ್ಯಕರ್ತರು ಒಪ್ಪಿಕೊಳ್ಳಲು ಮುಂದಾಗಿಲ್ಲ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೊರಗಿನವರು ಎಂಬುವ ಭಾವನೆ ಮೂಡುವಂತೆ ಈಗಾಗಲೇ ಕಾಂಗ್ರೆಸ್‌ ಬಹಿರಂಗವಾಗಿ ಸಾರುತ್ತಾ ಬಂದಿದ್ದಾರೆ. ಇದರಿಂದಾಗಿ ಸ್ವಾಭಿಮಾನಿ ಜೆಡಿಎಸ್‌ ಕಾರ್ಯಕರ್ತರು ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಾಂಗ್ರೆಸ್‌ ಜೆಡಿಎಸ್‌ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ತಮ್ಮತ್ತ ಸೆಳೆದುಕೊಳ್ಳುವ ತಂತ್ರಗಾರಿಕೆಯನ್ನು ವ್ಯವಸ್ಥಿತವಾಗಿ ಮಾಡುತ್ತಿದೆ. ಒಂದು ಸಮಯ ಕಾಂಗ್ರೆಸ್‌ ತಂತ್ರಗಾರಿಕೆ ಸಫಲವಾದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಅಡ್ಡಿಯಾಗಲಿದೆ ಎಂಬುವುದನ್ನು ತಳ್ಳಿಹಾಕುವಂತಿಲ್ಲ.ಜೆಡಿಎಸ್ ಹಾಗೂ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರ ನಾಯಕರು ಮಾತ್ರ ಮೈತ್ರಿಕೂಟದ ಮೂಲಕ ಕ್ಷೇತ್ರಗಳನ್ನು ಹಂಚಿಕೊಂಡಿದ್ದಾರೆ. ಅದರಂತೆ ಜೆಡಿಎಸ್ ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಆದರೆ ಇನ್ನೂಳಿದ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮಾತ್ರ ಜೆಡಿಎಸ್‌ ಹಾಗೂ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದ ಆರೋಪ ಕೇಳಿ ಬರುತ್ತಿವೆ. ಇದಕ್ಕೆ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳೂ ಹೊರತಾಗಿಲ್ಲ. ಜಿಲ್ಲಾಮಟ್ಟದಲ್ಲಿ ಹಾಗೂ ವಿಧಾನ ಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಬಿಜೆಪಿ ಪ್ರಚಾರ ಸಭೆ,ಸಮಾರಂಭ ಹಾಗೂ ಚುನಾವಣಾ ತಂತ್ರಗಾರಿಕೆ ಸಭೆಗಳಿಂದ ಜೆಡಿಎಸ್‌ ನಾಯಕರನ್ನು ಮತ್ತು ಕಾರ್ಯಕರ್ತರನ್ನು ದೂರ ಮಾಡಿದ್ದಾರೆ ಎಂಬುವುದು ಜೆಡಿಎಸ್‌ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಹಲವು ವರ್ಷಗಳಿಂದ ಪಕ್ಷದ ಸಂಘಟನೆ ಮಾಡಿರುವ ಬಿಜೆಪಿ ಕಾರ್ಯಕರ್ತರು ಮಾತ್ರ ತಮ್ಮ ಅಸ್ಥಿತ್ವಕ್ಕಾಗಿ ಜೆಡಿಎಸ್‌ ನಾಯಕರನ್ನು ಕಡೆಗಣಿಸುತ್ತಿರುವುದನ್ನು ಅಲ್ಲಗಳೆಯುವಂತಿಲ್ಲ. ಅಲ್ಲದೇ ಈ ಹಿಂದೆ ನಡೆದ ಪ್ರತಿಯೊಂದು ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಜೆಡಿಎಸ್‌ ಪಕ್ಷದ ವಿರುದ್ಧ ಪ್ರಚಾರ ಮಾಡಿರುವ ನಾಯಕರು ಮಾತ್ರ ಹೊಂದಾಣಿಕೆ ಮಾಡಿಕೊಂಡಿದ್ದಾರೆ.

ಆದರೆ ರಾಜಕೀಯವಾಗಿ ವೈರಿಗಳೆಂದು ಗುರುತಿಸಿಕೊಂಡಿರುವ ಕಾರ್ಯಕರ್ತರು ಮಾತ್ರ ಮೈತ್ರಿಯನ್ನು ಅಷ್ಟೊಂದು ಸಲಿಸಾಗಿ ಒಪ್ಪಿಕೊಳ್ಳಲು ಮುಂದಾಗುತ್ತಿಲ್ಲ. ಇದರ ಪರಿಣಾಮವಾಗಿ ಜೆಡಿಎಸ್‌ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಬಿಜೆಪಿ ಸಮೀಪ ಕರೆದುಕೊಳ್ಳುತ್ತಿಲ್ಲ ಎಂಬ ಚರ್ಚೆ ನಡೆದಿದೆ.