This is the title of the web page
This is the title of the web page

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

 

ಬೆಂಗಳೂರು:ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಹೇಳಲಾಗಿದ್ದು, ಅದರಂತೆ ನೌಕರರ ವರ್ಗಾವಣೆ ಮಾಡಬಹುದಾಗಿದೆ.