This is the title of the web page
This is the title of the web page

ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನವಿಲ್ಲ, ಭವಿಷ್ಯದಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವಿಲ್ಲ, ಹೀಗಾಗಿ ನೀವು ನನಗೆ ಶಕ್ತಿ ತುಂಬಬೇಕು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನವಿಲ್ಲ, ಭವಿಷ್ಯದಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವಿಲ್ಲ, ಹೀಗಾಗಿ ನೀವು ನನಗೆ ಶಕ್ತಿ ತುಂಬಬೇಕು:  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

 

ಮೈಸೂರು: ಬಿಜೆಪಿಯಲ್ಲಿ ಒಕ್ಕಲಿಗರಿಗೆ ಸ್ಥಾನವಿಲ್ಲ, ಭವಿಷ್ಯದಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವಿಲ್ಲ, ಹೀಗಾಗಿ ನೀವು ನನಗೆ ಶಕ್ತಿ ತುಂಬಬೇಕು ಎಂದು ಹೇಳಿದರು. ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸ್ಥಾನವಿಲ್ಲ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಪರವಾಗಿ ಕೆಲಸ ಮಾಡಿ ಎಂದು ಒಕ್ಕಲಿಗರಿಗೆ ಕರೆ ನೀಡಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಡಿಕೆ.ಶಿವಕುಮಾರ್ ಅವರು ಮಾತನಾಡಿದರು.

ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ, ನಾಯಕತ್ವದ ಪ್ರಶ್ನೆಯೂ ಎದುರಾಗಿದೆ ಎಂಬುದು ನನಗೆ ಗೊತ್ತಿದೆ. ಈಗ ಸಚಿವ ವೆಂಕಟೇಶ್ ಹಾಗೂ ಹರೀಶ್ ಗೌಡ ಮುಂದಾಳತ್ವ ವಹಿಸಿಕೊಂಡಿದ್ದಾರೆ. ನಾನು ನಿಮ್ಮೂರಿನ ಅಳಿಯ. ನನಗೂ ದೊಡ್ಡ ಜವಾಬ್ದಾರಿ ಇದೆ. ನೀವು ತಲೆ ಕಡೆಸಿಕೊಳ್ಳಲು ಹೋಗಬೇಡಿ. ಸ್ವಲ್ಪ ದಿನ ಅಷ್ಟೇ. ಚಲುವರಾಯಸ್ವಾಮಿ, ಕೃಷ್ಟೇಗೌಡ ಬಂದು ನನ್ನ ಹತ್ರ ನ್ಯಾಯ ಆಡ್ತಿದ್ರು. ಭಾಗದ ನ್ಯಾಯ ಆಡ್ತಿದ್ರು. ನೀವು ಆಡೊದು ಬೇಡ. ನಿಮ್ಮ ನ್ಯಾಯ ನಡೆಯುವುದಿಲ್ಲ. ಇದೆಲ್ಲ ದೆಹಲಿಯಲ್ಲಿ ನಡೆಯಬೇಕು ಎಂದು ಹೇಳಿದ್ದೇನೆ.

ಬಳಿಕ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೈಪೋಟಿ ಬದಿಗಿಟ್ಟು ಸಿಎಂ ಮಾಡಿದ್ದೆವು, ಆದರೆ, ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ, ಈಗ ನಾನು ವಿಷ ಹಾಕಿದ್ದೇನೆ ಎಂದು ಹೇಳುತ್ತಿದ್ದಾರೆ, ಜೆಡಿಎಸ್ ಅನ್ನು ನಾವು ಮುಗಿಸುವ ಅಗತ್ಯವಿಲ್ಲ. ಬಿಜೆಪಿಯೇ ಮುಗಿಸಿಬಿಡುತ್ತದೆ ಎಂದು ಹೇಳಿದರು.

ಹಾಸನದಲ್ಲಿ ಮೊಮ್ಮಗನ ಗೆಲುವನ್ನು ಖಚಿತಪಡಿಸಿಕೊಳ್ಳಲು ದೇವೇಗೌಡರಿಂದ ಸಾಧ್ಯವಿಲ್ಲ. ಅಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜನರೇ ವಿರೋಧ ವ್ಯಕ್ತಪಡಿಸಿದ್ದಾರೆ .ನನ್ನ ಸಹೋದರನ ವಿರುದ್ಧ ಕುಮಾರಸ್ವಾಮಿ ಸ್ಪರ್ಧಿಸಬೇಕಿತ್ತು. ಅಲ್ಲಿ ಶಾಸಕರಾಗಿರಲಿಲ್ಲವೇ? ಸಿಎಸ್ ಪುಟ್ಟರಾಜು ಹೆಸರು ಸುಳಿವು ನೀಡಿ ಇದೀಗ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ.