ಮೂಡಲಗಿ: ಮೂಡಲಗಿ: ಪಶ್ಚಿಮಘಟ ಹಾಗೂ ಜಿಲ್ಲೆಯಲ್ಲಿ ಬಿಡುವು ನೀಡದೆ
ಸುರಿಯುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚಾಗಿದರಿಂದ ತಾಲೂಕಿನ ಮೂರು
ಸೇತುವೆಗಳು ಸೋಮವಾರ ಜಲಾವೃತಗೊಂಡು ಸಂಚಾರ
ಸ್ಥಗಿತಗೊAಡಿದೆ. ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ
ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಘಟಪ್ರಭಾ ನದಿಗೆ ನೀರು ಬರುತ್ತಿದ್ದು, ಘಟಪ್ರಭಾ ನದಿಯ ನೀರಿನ ಮಟ್ಟ
ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ
ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಸುಣಧೋಳಿ ಸೇತುವೆ ಜಲಾವೃತ
ಸಂಚಾರ ಸ್ಥಗಿತ.